ಬೆಂಗಳೂರು: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಕುರಿತು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಪ್ರತಿಕ್ರಿಯೆ ನೀಡಿದ್ದು, ಈಗಾಗಲೇ ಒಂದು ದೂರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಆ ಬಗ್ಗೆ ವಿಸ್ತೃತ ತನಿಖೆ ಮಾಡಲಿದ್ದೇವೆ. ಯಾವುದೇ ತೀರ್ಮಾನವನ್ನು ಪಕ್ಷದ ಹಿರಿಯರು ಪ್ರಕಟ ಮಾಡುತ್ತಾರೆ ಎಂದಿದ್ದಾರೆ. ಮಾನ, ಮರ್ಯಾದೆ ಇದ್ರೆ ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಲಿ: ಸಿದ್ದರಾಮಯ್ಯ
ಆ ಬಗ್ಗೆ ಮಾತನಾಡುವ ಅಧಿಕಾರ ನನಗಿಲ್ಲ. ಇದೆಲ್ಲವೂ ನಮ್ಮ ಗಮನದಲ್ಲಿದೆ. ಪಕ್ಷದ ಮತ್ತು ಹಿರಿಯರು ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತಾರೆ. ಪಕ್ಷದ ನಿಲುವು ತನಿಖೆಗೆ ಸಂಬಂಧ ಇಲ್ಲ, ನಿಪ್ಪಕ್ಷಪಾತವಾಗಿ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿಯೊಬ್ಬಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆಂದು ನಿನ್ನೆ (ಮಾ. 02) ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಲಾಗಿದೆ.
ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಎಂಬುವರು ದೂರು ಸಲ್ಲಿಸಿದ್ದಾರೆ. ದೂರಿಗೆ ಸಂಬಂಧಿಸಿದಂತೆ ಇನ್ನೂ ಎಫ್‌ಐಆರ್ ಆಗಬೇಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಕೊಟ್ಟಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು, ದಿನೇಶ್ ಕಲ್ಲಹಳ್ಳಿ ಯಾರು ಅಂತಾ ನನಗೇ ಗೊತ್ತಿಲ್ಲ ಎಂದಿದ್ದಾರೆ.



