Connect with us

Dvgsuddi Kannada | online news portal | Kannada news online

ಕರ್ನಾಟಕ ವಿಧಾನಸಭೆ ಚುನಾವಣೆಗೆ ಡೇಟ್ ಫಿಕ್ಸ್; ಮೇ 10 ರಂದು ಮತದಾನ; ಮೇ 13ರಂದು ಫಲಿತಾಂಶ-ಇಂದಿನಿಂದಲೇ ನೀತಿ ಸಂಹಿತೆ ಜಾರಿ

ಪ್ರಮುಖ ಸುದ್ದಿ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಡೇಟ್ ಫಿಕ್ಸ್; ಮೇ 10 ರಂದು ಮತದಾನ; ಮೇ 13ರಂದು ಫಲಿತಾಂಶ-ಇಂದಿನಿಂದಲೇ ನೀತಿ ಸಂಹಿತೆ ಜಾರಿ

ವದೆಹಲಿ: ವಿಧಾನಸಭೆ ಕರ್ನಾಟಕ ವಿಧಾನಸಭೆಗೆ ಮೇ 10 ರಂದು ಮತದಾನ ನಡೆಯಲಿದ್ದು, ಒಂದೇ ಹಂತಗಳಲ್ಲಿ ಚುನಾವಣೆ ನಡೆಯಲಿದೆ.  ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಮುಖ್ಯ ಚುನಾವಣಾ ಆಯಕ್ತ ಸುನೀಲ್ ಅರೋರಾ ಅವರು ವೇಳಾಪಟ್ಟಿ ಪ್ರಕಟಿಸಿದರು.

  •  ಚುನಾವಣೆ ಪ್ರಮುಖ ದಿನಾಂಕ
  • ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ: 20 ಏಪ್ರಿಲ್‌
  • ನಾಮಪತ್ರ ಪರಿಶೀಲನೆ ಕೊನೆಯ ದಿನ: 23 ಏಪ್ರಿಲ್‌
  • ನಾಮಪತ್ರ ವಾಪಸ್‌ ಪಡೆಯಲು ಕೊನೆಯ ದಿನ: ಏಪ್ರಿಲ್‌ 24
  • ಮತದಾನ ನಡೆಯುವ ದಿನಾಂಕ: 10 ಮೇ
  • ಮೇ 13 ಕ್ಕೆ ಫಲಿತಾಂಶ

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿದ್ದು, ಪರಿಶಿಷ್ಟ ಜಾತಿಗೆ 36 ಮತ್ತು ಪರಿಶಿಷ್ಟ ಪಂಗಡಕ್ಕೆ 15 ಕ್ಷೇತ್ರಗಳನ್ನು ಮೀಸಲಿಡಲಾಗಿದೆ. ಒಟ್ಟಾರೆ ರಾಜ್ಯದಲ್ಲಿ 5,21,76,579 ಕೋಟಿ ಮತದಾರರಿದ್ದಾರೆ. ಕರ್ನಾಟಕದಲ್ಲಿ ಒಟ್ಟು ಮತದಾರರ ಸಂಖ್ಯೆ 5,21,73,599 ಇದೆ. ಈ ಪೈಕಿ ಪುರುಷ ಮತದಾರರ ಸಂಖ್ಯೆ – 2,62,42,561 ಹಾಗೂ ಮಹಿಳಾ ಮತದಾರರ ಸಂಖ್ಯೆ 2,59,26,319 ರಷ್ಟಿದೆ ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ ಅಂದಾಜು 4,699 ತೃತೀಯ ಲಿಂಗಿಗಳಿದ್ದು, ಮೊದಲ ಬಾರಿ ಮತದಾನ ಮಾಡುವವರ ಸಂಖ್ಯೆ  9,17,241ಇದೆ ಒಟ್ಟು ಮತಗಟ್ಟೆಗಳು -58,282 ಇವೆ ಈ ಪೈಕಿ ನಗರ ಪ್ರದೇಶದಲ್ಲಿ 24,063 ಇವೆ. ಮಹಿಳೆಯರಿಂದ ನಿರ್ವಹಣೆ ಮಾಡುವ ಮತಗಟ್ಟೆಗಳ ಸಂಖ್ಯೆ 1320 ಹಾಗೂ ಗ್ರಾಮೀಣ ಭಾಗದಲ್ಲಿ ಇರುವ ಮತಗಟ್ಟೆಗಳು 34,219 ಹಾಗೂ ಮಾದರಿ ಮತಗಟ್ಟೆಗಳ ಸಂಖ್ಯೆ 240 ಇವೆ.

ಇದೇ ಮೊದಲ ಬಾರಿಗೆ 80 ವರ್ಷ ಅದಕ್ಕಿಂತ ಮೇಲ್ಪಟ್ಟವರು ಹಾಗೂ ವಿಶೇಷ ಚೇತನ ಮತದಾರರಿಗೆ ಮೊದಲ ಬಾರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಲಾಗಿದೆ. . ಮತದಾನ ಕೇಂದ್ರಗಳಲ್ಲಿ ಇವರಿಗೆ ವಿಶೇಷ ಸೌಲಭ್ಯ ಒದಗಿಸಲಾಗುವುದು. ರಾಜ್ಯದಲ್ಲಿ 80 ವರ್ಷ ಮೇಲ್ಪಟ್ಟ 12,15,763 ಮಂದಿ ಮತದಾರರಿದ್ದಾರೆ. 16,976 ಮಂದಿ 100 ವರ್ಷ ಮೇಲ್ಪಟ್ಟವರಿದ್ದಾರೆ. 5.55 ಲಕ್ಷ ಅಂಗವಿಕಲರಿದ್ದು, ಈ ಪೈಕಿ ಮತದಾನ ಕೇಂದ್ರಕ್ಕೆ ಬರಲಾಗದೆ ಮನೆಯಲ್ಲೇ ಮತದಾನ ಬಯಸುವವರಿಗೆ ಆಯೋಗ ಅವಕಾಶ ಕಲ್ಪಿಸಲಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top