ಬೆಂಗಳೂರು; ರಾಜ್ಯದಲ್ಲಿ ಮುಂದಿನ ಐದು ದಿನ ಮುಂಗಾರು ಮಳೆ ಚುರುಕಾಗಲಿದ್ದು, ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ,ಮಳೆನಾಡು,ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ತುಮಕೂರು, ಹಾಸನ, ಮಂಡ್ಯ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಶಿವಮೊಗ್ಗ, ಚಿಕ್ಕಮಗಳೂರು, ಕರಾವಳಿ ಭಾಗದ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿಯಲ್ಲಿ ಬಿರುಗಾಳಿ ಗಂಟೆಗೆ 45ರಿಂದ 55 ಕಿ.ಮೀ ವೇಗದಲ್ಲಿ ಬೀಸಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.



