ಬೆಂಗಳೂರು: ರಾಜ್ಯದಲ್ಲಿ ಎರಡ್ಮೂರು ದಿನ ಸ್ವಲ್ಪ ತಗ್ಗಿದ್ದ ಮುಂಗಾರು ಮಳೆ, ಮತ್ತೆ ತನ್ನ ಅಬ್ಬರ ಮುಂದುವರೆಸಿದೆ. ರಾಜ್ಯದೆಲ್ಲಡೆ ಮೋಡ ಕವಿದ ವಾತಾವರಣವಿದ್ದು, ಮುಂದಿನ 24 ಗಂಟೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಯಲ್ಲಿ ಭಾರಿ ಮಳೆ ಬೀಳುವ ಬಗ್ಗೆ ಮುನ್ನೆಚ್ಚರಿಕೆ ಹವಾಮಾನ ಇಲಾಖೆ ನೀಡಿದೆ.
ಮಳೆ ಅಬ್ಬರಕ್ಕೆ ಬಹುತೇಕ ಡ್ಯಾಂ, ನದಿಗಳಿಗೆ ಜೀವ ಕಳೆ ಬಂದಿದ್ದು, ನೀರಿನ ಒಳ ಹರಿವು ಹೆಚ್ಚಿದೆ. ಮುಂದಿನ 24 ಗಂಟೆ ಬಹುತೇಕ ಕಡೆ ಜೋರು ಮಳೆಯಾಗಲಿದ್ದು, ಅದರಲ್ಲೂ ಕರಾವಳಿ ಪ್ರದೇಶದಲ್ಲಿ ಭಾರಿ ಮಳೆ ಬೀಳಲಿದೆ.
ಈ ಜಿಲ್ಲೆಗಳಿಗೆ ಭಾರಿ ಮಳೆ; ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಕೊಡಗು, ಉಡುಪಿ, ಚಾಮರಾಜನಗರ, ಮಂಡ್ಯ, ಮಂಗಳೂರು, ಉತ್ತರ ಕನ್ನಡ, ತುಮಕೂರು , ಹಾಸನ, ಚಿತ್ರದುರ್ಗ, ಬೆಳಗಾವಿ, ದಾವಣಗೆರೆ, ಬಳ್ಳಾರಿ ಸೇರಿ ಬಹುತೇಕ ಭಾಗಗಳಲ್ಲಿ ಭರ್ಜರಿ ಮಳೆ ಆಗಲಿದೆ. ವಿಜಯಪುರ & ಕಲಬುರಗಿ, ರಾಯಚೂರು, ಯಾದಗಿರಿ, ಬೀದರ್, ಬಾಗಲಕೋಟೆ , ಬೆಳಗಾವಿ, ಬಳ್ಳಾರಿ, ಕೊಪ್ಪಳ, ಧಾರವಾಡ, ಗದಗ ಜಿಲ್ಲೆಗಳಲ್ಲೂ ಮಳೆ ಅಬ್ಬರಿಲಿದೆ.



