Connect with us

Dvgsuddi Kannada | online news portal | Kannada news online

ಆರಂಭದಲ್ಲಿಯೇ ದುರ್ಬಲಗೊಂಡ ಮುಂಗಾರು; ಮತ್ತೆ ಮುಂಗಾರು ಚುರುಕು ಪಡೆಯುವುದು ಯಾವಾಗ..?

rain22

ಪ್ರಮುಖ ಸುದ್ದಿ

ಆರಂಭದಲ್ಲಿಯೇ ದುರ್ಬಲಗೊಂಡ ಮುಂಗಾರು; ಮತ್ತೆ ಮುಂಗಾರು ಚುರುಕು ಪಡೆಯುವುದು ಯಾವಾಗ..?

ಬೆಂಗಳೂರು; ಈ ಬಾರಿ ಮುಂಗಾರು ವಾಡಿಕೆಗಿಂತ ಹೆಚ್ಚಾಗಲಿದೆ ಎಂದು ಹವಾಮಾನ ತಜ್ಞರು ಅಂದಾಜಿಸಿದ್ದರು. ಆದರೆ, ಮುಂಗಾರು ಮಳೆ ಪ್ರಾರಂಭವಾಗಿ ಎರಡು ವಾರದಲ್ಲಿಯೇ ದುರ್ಬಲಗೊಂಡಿದೆ. ರಾಜ್ಯದ ಕೆಲ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುದ್ದರಿಂದ ಮೆಕ್ಕೆಜೋಳ, ಜೋಳ, ತೋಗರಿ ಸೇರಿ ಇತರೆ ಬೆಳೆ ಬಿತ್ತನೆ ಕಾರ್ಯ ನಡೆಸಿದ ರೈತರು ಮುಗಿಲು ನೋಡುವಂತಾಗಿದೆ.

ಜೂನ್ 21ರ ಬಳಿಕ ಮತ್ತೆ ಮುಂಗಾರು ಮಳೆ ಚುರುಕು ಪಡೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿಯಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಅಂದಾಜಿಸಲಾಗಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top