Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ಚುರುಕು ಪಡೆದ ಮುಂಗಾರು; ಐದು ದಿನ ಭಾರೀ ಮಳೆ‌ ಮುನ್ಸೂಚನೆ; ಯೆಲ್ಲೋ ಅಲರ್ಟ್ ಘೋಷಣೆ..!

ಪ್ರಮುಖ ಸುದ್ದಿ

ರಾಜ್ಯದಲ್ಲಿ ಚುರುಕು ಪಡೆದ ಮುಂಗಾರು; ಐದು ದಿನ ಭಾರೀ ಮಳೆ‌ ಮುನ್ಸೂಚನೆ; ಯೆಲ್ಲೋ ಅಲರ್ಟ್ ಘೋಷಣೆ..!

ಬೆಂಗಳೂರು: ರಾಜ್ಯದಲ್ಲಿ ನಿನ್ನೆಯಿಂದ (ಜೂನ್ 20) ಮುಂಗಾರು ಮಳೆ ಚುರುಕು ಪಡೆದಿದ್ದು, ಮುಂದಿನ 5 ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ, ಮಲೆನಾಡು,ದಕ್ಷಿಣ, ಉತ್ತರ ಒಳನಾಡಿನಲ್ಲಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಿನ್ನೆ (ಜೂ.20) ಉತ್ತಮ ಮಳೆಯಾಗಿದೆ. ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.

ಮುಂಗಾರು ಚುರುಕುಗೊಂಡಿದ್ದು , ಮಲೆನಾಡು ಭಾಗದ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ದಕ್ಷಿಣ ಒಳನಾಡಿನ ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ತುಮಕೂರು, ಹಾಸನ, ಮಂಡ್ಯ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಶಿವಮೊಗ್ಗ, ಚಿಕ್ಕಮಗಳೂರು, ಕರಾವಳಿ ಭಾಗದ ಉಡುಪಿ, ದಕ್ಷಿ ಣಕನ್ನಡ ಹಾಗೂದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮುಂದಿನ ಐದು ದಿನ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಜೂನ್ 23 ರ ನಂತರ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top