Connect with us

Dvgsuddi Kannada | online news portal | Kannada news online

ಮುಂದಿನ ಮೂರ್ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ; 15 ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

rain22

ಪ್ರಮುಖ ಸುದ್ದಿ

ಮುಂದಿನ ಮೂರ್ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ; 15 ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಜೂನ್ ಆರಂಭದಲ್ಲಿ ಶುರುವಾಗಬೇಕಿದ್ದ ಮುಂಗಾರು ಮಳೆ, ಸೈಕ್ಲೋನ್ ಪರಿಣಾಮದಿಂದ ದುರ್ಬಲಗೊಂಡಿತ್ತು. ಇದೀಗ ಜೂನ್ 20‌ರಿಂದ ನಿಧಾನವಾಗಿ ಮುಂಗಾರು ಚುರುಕು ಪಡೆದ ಪರಿಣಾಮ ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಜೂನ್​ 25ರಿಂದ ಮುಂಗಾರು ಮಳೆ ಇನ್ನಷ್ಟು ಚುರುಕು ಪಡೆದುಕೊಳ್ಳಲಿದ್ದು, 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಚಿತ್ರದುರ್ಗ, ಹಾಸನ, ಮಂಡ್ಯ, ತುಮಕೂರಿನಲ್ಲಿಯೂ ಜೂ 22ರಂದು ಯೆಲ್ಲೋ ಅಲರ್ಟ್ ಇದೆ. ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜೂ 23ರಿಂದ ಮಳೆ ಸುರಿಯಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಜೂ 25ರಿಂದ ಮುಂದಿನ ಎರಡು ದಿನ ಭಾರಿ ಮಳೆ ಬೀಳುವ ಸಾಧ್ಯತೆ ಎಂದಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಮುಂಗಾರು ಮಾರುತಗಳು ಮಲೆನಾಡು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಪ್ರಬಲಗೊಂಡ ಹಿನ್ನೆಲೆಯಲ್ಲಿ ಮೋಡ ಕವಿದ ವಾತಾವರಣದ ಜತೆಗೆ ಮಳೆಯಾಗುತ್ತಿದೆ. ಅರಬ್ಬಿ ಸಮುದ್ರದಲ್ಲಿ ಮುಂಗಾರು ಇನ್ನಷ್ಟು ಮುನ್ನಡೆಯಲು ಪೂರಕ ವಾತಾವರಣ ಉಂಟಾಗಿರುವ ಹಿನ್ನೆಲೆಯಲ್ಲಿ ಉತ್ತರ ಒಳನಾಡಿನಲ್ಲೂ ಮಾರುತಗಳು ಪ್ರವೇಶಿಸಿದ್ದು, ಜೂ 25ರಿಂದ ಈ ಭಾಗದಲ್ಲಿ ಜೋರಾಗಿ ಮಳೆಯಾಗಲಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

  • astrology today astrology today

    ಪ್ರಮುಖ ಸುದ್ದಿ

    ಸೋಮವಾರದ ರಾಶಿ ಭವಿಷ್ಯ 30 ಜೂನ್ 2025

    By

    ಈ ರಾಶಿಯವರಿಗೆ ಉದ್ಯೋಗದಲ್ಲಿ ವರ್ಗಾವಣೆ ಪ್ರಮೋಷನ್ ವೇತನದಲ್ಲಿ ಏರಿಕೆ ಸಂಭವ, ಚಿನ್ನದ ತಟ್ಟೆಯಲ್ಲಿ ಊಟ ಮಾಡುವ ಏಕೈಕ ರಾಶಿ ಎಂದರೆ ಇವರು,...

  • rain22 rain22

    ಪ್ರಮುಖ ಸುದ್ದಿ

    ಮುಂದಿನ ತಿಂಗಳು ವಾಡಿಕೆಗಿಂತ ಅಧಿಕ ಮಳೆ ಮುನ್ಸೂಚನೆ

    By

    ಬೆಂಗಳೂರು: ಈ ಬಾರಿ ಮೇ, ಜೂನ್ ತಿಂಗಳಲ್ಲಿ ಮುಂಗಾರು ಮಳೆ (monsoon rain)  ನಿರೀಕ್ಷೆ ಮೀರಿ ಸುರಿದಿದೆ. ಇನ್ನೂ ಕೆಲ ಜಿಲ್ಲೆಯಲ್ಲಿ...

  • astrology today astrology today

    ಪ್ರಮುಖ ಸುದ್ದಿ

    ಶನಿವಾರದ ರಾಶಿ ಭವಿಷ್ಯ 28 ಜೂನ್ 2025

    By

    ಈ ರಾಶಿಯವರ ಉದ್ಯೋಗ ವ್ಯಾಪಾರ ವಹಿವಾಟಗಳಲ್ಲಿ ಭಾರಿ ನಷ್ಟ, ಈ ರಾಶಿಯವರ ಹಿತ ಶತ್ರುಗಳನ್ನು ನಿಯಂತ್ರಿಸುವುದೇ ಕಷ್ಟ, ಶನಿವಾರದ ರಾಶಿ ಭವಿಷ್ಯ...

  • astrology today astrology today

    ಪ್ರಮುಖ ಸುದ್ದಿ

    ಗುರುವಾರದ ರಾಶಿ ಭವಿಷ್ಯ 26 ಜೂನ್ 2025

    By

    ಈ ರಾಶಿಯವರಿಗೆ ನಂಬಿದವರು ದೂರ ಆಗುತ್ತಾರೆ, ಈ ರಾಶಿಯವರ ಮದುವೆ ವಿಳಂಬ ಎಂಬ ಏಕೆ? ಗುರುವಾರದ ರಾಶಿ ಭವಿಷ್ಯ 26 ಜೂನ್...

  • images 11 images 11

    ಪ್ರಮುಖ ಸುದ್ದಿ

    ಗಜಕೇಸರಿ ಯೋಗ ಮಾಹಿತಿ

    By

    ಸೋಮಶೇಖರ್B.Sc ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರಪ್ರವೀಣರು. Mob.93534 88403 ವ್ಯಕ್ತಿಯ ಜನ್ಮ ಕುಂಡಲಿಯನ್ನು ನೋಡಿ ಯೋಗಗಳನ್ನು ನೋಡಬಹುದು. ಅದರಲ್ಲಿ ಒಂದು...

To Top