ಬೆಂಗಳೂರು: ರಾಜ್ಯದ ಕರಾವಳಿ ಮಲೆನಾಡು ಮತ್ತು ಉತ್ತರ ಒಳನಾಡಿನ ಬಹುತೇಕ ಕಡೆ ಹಾಗೂ ದಕ್ಷಿಣ ಒಳನಾಡಿನ ಕೆಲ ಕಡೆ ಎರಡು ದಿನ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ( ಏ.22) ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಏ.23ರಂದು ಭಾನುವಾರ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕಳೆದ 15 ದಿನದಿಂದ ನಿರಂತರ ಮಳೆಯಾಗುತ್ತಿದ್ದು, ಎರಡು ದಿನ ಇನ್ನಷ್ಟು ಚುರುಕು ಪಡೆಯಲಿದೆ.
ಕರಾವಳಿಯಲ್ಲಿ ಗಾಳಿಯು ಗಂಟೆಗೆ 40-45 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯಂತೆ ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಕೆಲ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಲಿದೆ.



