ಬೆಂಗಳೂರು: ರಾಜ್ಯದಲ್ಲಿ ತೀವ್ರ ಮಳೆ ಕೊರತೆ ನಡುವೆ ಮುಂದಿನ ಒಂದು ವಾರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಉತ್ತರ ಒಳನಾಡಿನ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಇಂದು (ಭಾನುವಾರ) ಭಾರೀ ಮಳೆ ಹಿನ್ನೆಲೆ ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಧಾರವಾಡ, ಉತ್ತರ ಕನ್ನಡ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಸಾಧಾರಣಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ರಾತ್ರಿ ವೇಳೆ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.



