ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕು; ಸೆ.20ರವರೆಗೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ತೀವ್ರ ಮಳೆಯಿಂದ ತತ್ತರಿಸಿದ್ದ ರಾಜ್ಯದ ಜನತೆಗೆ ತುಸು ನೆಮ್ಮದಿಯ ಸುದ್ದಿ. ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕು ಪಡೆದುಕೊಂಡಿದ್ದು, ರಾಜ್ಯದ ಕರಾವಳಿ ಜಿಲ್ಲೆಗಳು , ಮಲೆನಾಡು ಹಾಗೂ ಕೊಡಗಿನಲ್ಲಿ ಇಂದು ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಸೆಪ್ಟೆಂಬರ್ 20ರವರೆ ರಾಜ್ಯದಲ್ಲಿ ಉತ್ತಮ‌‌ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಮತ್ತು ಮಲೆನಾಡು ಭಾಗದ ಕೊಡಗು ಜಿಲ್ಲೆಯಲ್ಲಿ 6 ಸೆಂ.ಮೀನಿಂದ 11 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ. … Continue reading ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕು; ಸೆ.20ರವರೆಗೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ