ಬೆಂಗಳೂರು : ಭಾರತ ಸರ್ಕಾರ ಮತ್ತು ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಆಯುಷ್ಮಾನ್ ಭಾರತ್, ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಯೋಜನೆ ಜಾರಿಗೆ ತಂದಿದೆ. ಈ ಯಾಒಜನೆಯಡಿ ದೇಶದ ಹಾಗೂ ರಾಜ್ಯದ ಬಡ ಜನರಿಗೆ 5 ಲಕ್ಷ ರೂ.ಗಳ ಆರೋಗ್ಯ ವಿಮಾ ರಕ್ಷಣೆಯನ್ನು ಒದಗಿಸುತ್ತಿದೆ.
ಕಡು ಬಡವರು ಸಹಿತ ಉನ್ನತ ಮಟ್ಟದ ಆಸ್ಪತ್ರೆಗಳಲ್ಲಿ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಪಡೆಯಲು ಸರ್ಕಾರ ರೂಪಿಸಿರುವ “ಆಯುಷ್ಮಾನ್ ಭಾರತ್ – ಪ್ರಧಾನಮಂತ್ರಿ ಜನ ಆರೋಗ್ಯ ಯೋಜನಾ – ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ” ಕಾರ್ಡ್‍ಗಳನ್ನು ಪಡೆದು, ಆರೋಗ್ಯ ಸಮಸ್ಯೆಗಳ ಚಿಕಿತ್ಸಾ ಸಂದರ್ಭದಲ್ಲಿ ಬಿಪಿಎಲ್ ಕುಟುಂಬಗಳಿಗೆ ವಾರ್ಷಿಕ ರೂ.5 ಲಕ್ಷ ಹಾಗೂ ಎಪಿಎಲ್ ಕುಟುಂಬಗಳಿಗೆ 1.5 ಲಕ್ಷದವರೆಗೆ ಉಚಿತ ಚಿಕಿತ್ಸಾ ವೆಚ್ಚದ ಸೌಲಭ್ಯ ಪಡೆದುಕೊಳ್ಳಬಹುದು.
ಈ ಯೋಜನೆಗೆ ಅರ್ಜಿ ಸಲ್ಲಿಸುವ ಮೂಲಕ ದೇಶದ ಅನೇಕ ಜನರು ಯೋಜನೆಯ ಲಾಭವನ್ನು ಪಡೆಯುತ್ತಿದ್ದಾರೆ. ನೀವು ಸಹ ಆಯುಷ್ಮಾನ್ ಭಾರತ್ ಯೋಜನೆಗೆ ಅರ್ಜಿ ಸಲ್ಲಿಸಲು ಹೊರಟಿದ್ದರೆ. ಅಂತಹ ಪರಿಸ್ಥಿತಿಯಲ್ಲಿ, ನೀವು ಕೆಲವು ದಾಖಲೆಗಳನ್ನು ಹೊಂದಿರುವುದು ಮುಖ್ಯ. ಯೋಜನೆಗೆ ಅಗತ್ಯ ದಾಖಲೆಗಳು; ಆಧಾರ್ ಕಾರ್ಡ್, ಪಡಿತರ ಚೀಟಿ, ಮೊಬೈಲ್ ಸಂಖ್ಯೆ, ನಿವಾಸ ಪ್ರಮಾಣಪತ್ರ, ಕುಟುಂಬದ ಎಲ್ಲಾ ಸದಸ್ಯರ ದಾಖಲೆ ಅಗತ್ಯ.



