ಮೈಸೂರು: ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಸೇರಿದಂತೆ ಮಠದ ಮೂವರು ಹಾಗೂ ಮೈಸೂರಿನ ಇಬ್ಬರ ವಿರುದ್ಧ ವಿದ್ಯಾರ್ಥಿನಿಯರಿಬ್ಬರು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪೋಕ್ಸೋ (ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ) ಕೇಸ್ ದಾಖಲಿಸಿದ್ದಾರೆ.
ಪ್ರಕರಣದಲ್ಲಿ ಶರಣರು ಮೊದಲ ಆರೋಪಿಯಾಗಿದ್ದು, ಚಿತ್ರದುರ್ಗದ ಅಕ್ಕಮಹಾದೇವಿ ವಸತಿ ನಿಲಯದ ವಾರ್ಡನ್ ರಶ್ಮಿ ಎರಡನೇ ಆರೋಪಿಯಾಗಿದ್ದಾರೆ. ಮಠದ ಬಸವಾದಿತ್ಯ ಮೂರನೇ ಆರೋಪಿ. ಮೈಸೂರಿನ ಪರಮಶಿವಯ್ಯ ಮತ್ತು ವಕೀಲ ಗಂಗಾಧರಯ್ಯ ನಾಲ್ಕು ಮತ್ತು ಐದನೇ ಆರೋಪಿಗಳಾಗಿದ್ದಾರೆ. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ಸಿ.ಚಂದ್ರಕುಮಾರ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ನಿನ್ನೆ ರಾತ್ರಿ 10.30ರ ವೇಳೆಗೆ ದೂರು ದಾಖಲಾಗಿದೆ.



