Connect with us

Dvgsuddi Kannada | online news portal | Kannada news online

ಮುರುಘಾ ಶರಣ ವಿರುದ್ಧ ಪೋಕ್ಸೋ ಕೇಸ್ ದಾಖಲು

IMG 20220827 123022

ಪ್ರಮುಖ ಸುದ್ದಿ

ಮುರುಘಾ ಶರಣ ವಿರುದ್ಧ ಪೋಕ್ಸೋ ಕೇಸ್ ದಾಖಲು

ಮೈಸೂರು: ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಸೇರಿದಂತೆ ಮಠದ ಮೂವರು ಹಾಗೂ ಮೈಸೂರಿನ ಇಬ್ಬರ ವಿರುದ್ಧ ವಿದ್ಯಾರ್ಥಿನಿಯರಿಬ್ಬರು ಮೈಸೂರಿನ ನಜರಾಬಾದ್‌ ಠಾಣೆಯಲ್ಲಿ  ಪೋಕ್ಸೋ  (ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ) ಕೇಸ್ ದಾಖಲಿಸಿದ್ದಾರೆ.

ಪ್ರಕರಣದಲ್ಲಿ ಶರಣರು ಮೊದಲ ಆರೋಪಿಯಾಗಿದ್ದು, ಚಿತ್ರದುರ್ಗದ ಅಕ್ಕಮಹಾದೇವಿ ವಸತಿ ನಿಲಯದ ವಾರ್ಡನ್‌ ರಶ್ಮಿ ಎರಡನೇ ಆರೋಪಿಯಾಗಿದ್ದಾರೆ. ಮಠದ ಬಸವಾದಿತ್ಯ ಮೂರನೇ ಆರೋಪಿ. ಮೈಸೂರಿನ ಪರಮಶಿವಯ್ಯ ಮತ್ತು ವಕೀಲ ಗಂಗಾಧರಯ್ಯ ನಾಲ್ಕು ಮತ್ತು ಐದನೇ ಆರೋಪಿಗಳಾಗಿದ್ದಾರೆ. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ಸಿ.ಚಂದ್ರಕುಮಾರ್‌ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ನಿನ್ನೆ ರಾತ್ರಿ 10.30ರ ವೇಳೆಗೆ ದೂರು ದಾಖಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top