ಬೆಂಗಳೂರು: ರಾಜ್ಯದ ಜನತೆಗೆ ಸರ್ಕಾರ ಮತ್ತೊಂದು ಬೆಲೆ ಏರಿಕೆ ಬರೆ ನೀಡಿದ್ದು, ನಂದಿನಿ ಹಾಲಿನ (nandini milk Price) ದರ ಪ್ರತಿ ಲೀಟರ್ ಗೆ 4 ರೂಪಾಯಿ ಏರಿಕೆ (rate hike) ಮಾಡಲು ಇಂದು ( ಮಾ.27) ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರಕಿದೆ.
ವಿಕಾಸಸೌಧದಲ್ಲಿ ಮಾಹಿತಿ ನೀಡಿದ ಪಶುಸಂಗೋಪನ ಸಚಿವ ಕೆ ವೆಂಕಟೇಶ್ ,ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆಯಲ್ಲಿ ನಂದಿನಿ ಹಾಲಿನ ದರ 4 ರೂ ಏರಿಕೆಗೆ ಅನುಮೋದನೆ ದೊರಕಿದೆ.
ಹಾಲಿನ ದರ ಪರಿಷ್ಕರಣೆ ಬಗ್ಗೆ ಕರ್ನಾಟಕ ಹಾಲು ಒಕ್ಕೂಟದ (kmf) ಅಧಿಕಾರಿಗಳು ಜತೆ ಸಿಎಂ ಸಭೆ ನಡೆಸಿದ್ದರು. ಈ ವೇಳೆ ಹಾಲು ಒಕ್ಕೂಟದಿಂದ ಪ್ರತಿ ಲೀಟರ್ ಗೆ ,5 ರೂಪಾಯಿ ಹೆಚ್ಚಿಸುವಂತೆ ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದವು. ಈ ವೇಳೆ ಹಾಲಿನ ದರ ಹೆಚ್ಚಳಕ್ಕೆ ಅನುಮತಿ ನೀಡುವ ಭರವಸೆಯನ್ನು ಸಿದ್ದರಾಮಯ್ಯ ನೀಡಿದ್ದರು. ಇದೀಗ ಕ್ಯಾಬಿನೆಟ್ ಮೀಟಿಂಗ್‌ನಲ್ಲಿ ನಂದಿನಿ ಹಾಲಿನ ದರವನ್ನು 4 ರೂ. ಹೆಚ್ಚಳ ಮಾಡಲು ಅನುಮೋದನೆ ನೀಡಲಾಗಿದೆ.
- ಯಾವುದಕ್ಕೆ ಎಷ್ಟು ದರ ಏರಿಕೆ..?
- ನೀಲಿ ಪ್ಯಾಕೆಟ್ ಹಾಲು – 44 ರೂ ನಿಂದ 48 ರೂ.
- ಆರೆಂಜ್ ಪ್ಯಾಕೆಟ್ ಹಾಲು – 54 ರೂ. ನಿಂದ 58 ರೂ.
- ಸಮೃದ್ಧಿ ಹಾಲಿನ ಪ್ಯಾಕೆಟ್ 56 ರೂ. ನಿಂದ 60 ರೂ.
- ಗ್ರೀನ್ ಸ್ಪೇಷಲ್ 54 ರೂ. ನಿಂದ 58 ರೂ.
ನಾರ್ಮಲ್ ಗ್ರೀನ್ 52 ರೂ. ನಿಂದ 56 ರೂ.
ಈಗಾಗಲೇ ರಾಜ್ಯ ಸರ್ಕಾರ ಕೆಎಸ್‌ಆರ್ಟಿಸಿ ಮತ್ತು ಬೆಂಗಳೂರಿನಲ್ಲಿ ಮೆಟ್ರೋ ಪ್ರಯಾಣದ ಟಿಕೆಟ್ ದರ ಏರಿಕೆ ಜೊತೆ ರಾಜ್ಯದ ಜನತೆ ಮತ್ತೊಂದು ದರ ಏರಿಕೆ ಬರೆ ಎಳೆದಿದೆ.