Connect with us

Dvgsuddi Kannada | online news portal | Kannada news online

ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಬೇಕಾ..?; ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಸಲು ನಾಳೆ ಮಧ್ಯಾಹ್ನ 3 ಗಂಟೆ ವರೆಗೆ ಅವಕಾಶ

bpl card 2

ಪ್ರಮುಖ ಸುದ್ದಿ

ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಬೇಕಾ..?; ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಸಲು ನಾಳೆ ಮಧ್ಯಾಹ್ನ 3 ಗಂಟೆ ವರೆಗೆ ಅವಕಾಶ

ಬೆಂಗಳೂರು: ಹೊಸ ಬಿಪಿಎಲ್ (BPL), ಎಪಿಎಲ್‌ (APL) ರೇಷನ್ ಕಾರ್ಡ್ (ration card) ಗೆ ಅರ್ಜಿ ಸಲ್ಲಿಕೆಗೆ ಮತ್ತೊಂದು ಅವಕಾಶ ಕಲ್ಪಿಸಲಾಗಿದೆ. ಮೇ. 1ರಿಂದ 5ರವರೆಗೆ ಮಧ್ಯಾಹ್ನ 1ರಿಂದ 3 ರ ವರೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಹೊಸ ಬಿಪಿಎಲ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಕೆಗೆ ಆಹಾರ ನಾಗರೀಕ ಸರಬರಾಜು ಇಲಾಖೆ ಅನುಮತಿ ನೀಡಿದೆ. ahara.kar.nic.in ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. ಫಲಾನುಭವಿಗಳು ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.ಈ ಐದು ದಿನ ಮಧ್ಯಾಹ್ನ 1ರಿಂದ 3 ರ ವರೆಗೆ ಮಾತ್ರ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಹೊಸ ಕಾರ್ಡ್‌ಗೆ ಯಾರು ಅರ್ಜಿ ಸಲ್ಲಿಸಬಹುದು..?

  • ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು
  • ಯಾವುದೇ ಪಡಿತರ ಚೀಟಿ ಹೊಂದಿರದವರು ಅರ್ಜಿ ಸಲ್ಲಿಕೆ ಮಾಡಬಹುದು
  • ನವ ವಿವಾಹ ದಂಪತಿಗಳು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು
  • ಆದಾಯ ಪ್ರಮಾಣ ಪತ್ರ ಮೇಲೆ ಬಿಪಿಎಲ್, ಎಪಿಎಲ್ ಕಾರ್ಡ್ ನಿರ್ಧಾರ

ಯಾವ ದಾಖಲೆ ಅಗತ್ಯ?

  • ವೋಟರ್ ಐಡಿ
  • ಆಧಾರ್ ಕಾರ್ಡ್
  • ವಾಹನ ಚಾಲನಾ ಪರವಾನಗಿ
  • ಪಾರ್ಸ್ ಪೋರ್ಟ್ ಅಳತೆಯ ಭಾವಚಿತ್ರ
  • ಮೊಬೈಲ್ ಸಂಖ್ಯೆ
  • ಸ್ವಯಂ ಘೋಷಿತ ಪ್ರಮಾಣ ಪತ್ರ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top