ಬೆಂಗಳೂರು: ದಾವಣಗೆರೆ ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ 2022-23 ನೇ ಸಾಲಿನಲ್ಲಿ ಪದವಿ ಪೂರ್ವ ವಸತಿ ಶಾಲೆಗಳನ್ನು ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲೆಯ ಹರಿಹರ ತಾಲ್ಲೂಕಿನ ಕೊಂಡಜ್ಜಿಯಲ್ಲಿ ನೂತನ ವಸತಿ ಕಾಲೇಜು ಆರಂಭವಾಗಲಿದೆ.
ಅಲ್ಪಸಂಖ್ಯಾತರ ಮೊರಾರ್ಜಿದೇಸಾಯಿ ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿರುವ 10 ಜಿಲ್ಲೆಗಳಲ್ಲಿ ಪದವಿ ಪೂರ್ವ ವಸತಿ ಕಾಲೇಜುಗಳನ್ನು ಪ್ರಾರಂಭಿಸಲು ಹಾಗೂ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳೊಂದಿಗೆ ವಿಲೀನಗೊಳಿಸಿ ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಗಳೆಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.ಈ ಕಾಲೇಜಿನಲ್ಲಿ ಪ್ರಥಮ ಪಿಯುಸಿಗೆ 60 ಹಾಗೂ ದ್ವಿತೀಯ ಪಿಯುಸಿಗೆ 60 ವಿದ್ಯಾರ್ಥಿಗಳು ಸೇರಿ ಒಟ್ಟು 120 ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳಬಹುದು.
- 2022-23ನೇ ಸಾಲಿನಲ್ಲಿ ಮಂಜೂರಾದ 10 ಪದವಿ ಪೂರ್ವ ವಸತಿ ಕಾಲೇಜುಗಳು
- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗಿಡ್ಡಪಣ ಹಳ್ಳಿ
- ಚಿಕ್ಕಮಗಳೂರು ಜಿಲ್ಲೆಯ ತೇಗೂರು
- ಚಾಮರಾಜನಗರ ಗುಂಡ್ಲುಪೇಟೆ
- ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕೊಡ್ಲಿಪೇಟೆ
- ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕೊಂಡಜ್ಜಿ
- ಹುಬ್ಬಳ್ಳಿ- ಧಾರವಾಡ (ಅಂಚಟಿಗೇರೆ)
- ಗದಗ (ಮಲ್ಲಸಮುದ್ರ)
- ಕೋಲಾರ
- ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಹಳಿಯಾಳ
- ವಿಜಯನಗರ ಜಿಲ್ಲೆಯ ಹೊಸಪೇಟೆ



