ಬೆಂಗಳೂರು: ಹೊಸದಾಗಿ APL, BPL ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ನಾಳೆ (ಡಿ.3) ಒಂದೇ ದಿನ ಆಹಾರ ಇಲಾಖೆ ಅವಕಾಶ ಕಲ್ಪಿಸಿದೆ.ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರಾಜ್ಯಾಧ್ಯಂತ ನಾಳೆ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದೆ.
ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್ ಗೆ ಮೊಬೈಲ್ ಸಂಖ್ಯೆ ಲಿಂಕ್ ಆಗಿರಬೇಕು. 6 ವರ್ಷದ ಒಳಗಿನ ಮಕ್ಕಳಿದ್ದರೇ ಜನನ ಪ್ರಮಾಣಪತ್ರವನ್ನು ಹೆಸರು ಸೇರ್ಪಡೆಗೆ ಬೇಕು. 6 ವರ್ಷ ಮೇಲ್ಪಟ್ಟವರಿಗೆ ಪ್ರಸಕ್ತ ಸಾಲಿನ ಜಾತಿ ಪ್ರಮಾಣಪತ್ರ ನೀಡಬೇಕು.
ಅಗತ್ಯ ದಾಖಲೆ
- ವಾಸವಿರುವ ನಗರಸಭೆ/ಪುರಸಭೆ/ನಗರ ಪಾಲಿಕೆಯ ವಾರ್ಡ್ ಸಂಖ್ಯೆ, ಗ್ರಾಮದ ಹೆಸರು.
- ಮನೆಯ ವಿದ್ಯುತ್ ಬಿಲ್
- ಕುಟುಂಬದ ಸದಸ್ಯರ ಮುಖ್ಯಸ್ಥರು/ಅರ್ಜಿದಾರರೊಂದಿಗೆ ಹೊಂದಿರುವ ಸಂಬಂಧ, ಕುಟುಂಬ ಸದಸ್ಯರೆಲ್ಲರ ಹುಟ್ಟಿದ ದಿನಾಂಕ, ವೃತ್ತಿ ಮತ್ತು ಅವರ ವಾರ್ಷಿಕ ವರಮಾನ.
- ಈಗಿರುವ ಮನೆಯಲ್ಲಿ ಎಷ್ಟು ಸಮಯದಿಂದ ವಾಸವಾಗಿದ್ದಾರೆಂಬ ಮಾಹಿತಿ
- ಮೊಬೈಲ್ ನಂಬರ್
- ನಿವಾಸದ ಪೂರ್ಣ ವಿಳಾಸ , ಅರ್ಜಿದಾರರು ಅವಿವಾಹಿತರಾಗಿದ್ದಲ್ಲಿ ಅವರ ಪೋಷಕರಿರುವ ಪೂರ್ಣ ವಿಳಾಸ
- ಸ್ವಂತ ಮನೆಯಾಗಿದ್ದಲ್ಲಿ ಮನೆಯ ಆಸ್ತಿ ಸಂಖ್ಯೆ ವಿವರ
ಹೊಸ BPL, APL ಕಾರ್ಡ್ ಗೆ ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಬೆಂಗಳೂರು ಒನ್ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬೇಕಿದೆ.



