ಬೆಂಗಳೂರು : ಚುನಾಯಿತ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ತಮ್ಮ ಖಾಸಗಿ ವಾಹನಗಳ ಮೇಲೆ ಯಾವುದೇ ಹೆಸರು, ಲಾಂಛನ ಹಾಗೂ ಸಂಘ-ಸಂಸ್ಥೆಗಳ ಹೆಸರುಗಳನ್ನು ಹಾಕಿಕೊಳ್ಳುವುದಕ್ಕೆ ನಿರ್ಬಂಧಿಸಲಾಗಿದೆ. ಹೀಗಿದ್ದೂ ಹಾಕಿಕೊಂಡು ಓಡಾಡುತ್ತಿರುವುದನ್ನು ಗಮನಿಸಿರುವಂತ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ತೆರವುಗೊಳಿಸಲು ಖಡಕ್ ಸೂಚಿಸಿದೆ.
ಜನಪ್ರತಿನಿಧಿಗಳೇ, ಸಾರ್ವಜನಿಕರೇ, ನಿಮ್ಮ ಖಾಸಗಿ ವಾಹನಗಳ ಮೇಲೆ ಯಾವುದೇ ಹೆಸರು, ಲಾಂಛನ ಹಾಕಿಸಿಕೊಂಡಿದ್ದರೇ ತೆಗೆದು ಹಾಕಿ.ಈ ಕುರಿತಂತೆ ವಿಧಾನಪರಿಷತ್ತಿನ ಎಲ್ಲಾ ಸದಸ್ಯರಿಗೆ ಕಾರ್ಯದರ್ಶಿ ಕೆ ಆರ್ ಮಹಾಲಕ್ಷ್ಮಿ ಪತ್ರ ಬರೆದಿದ್ದು, ಕೇಂದ್ರ ಮೋಟಾರು ವಾಹನಗಳ ನಿಯಮಗಳು 1989ರ ನಿಯಮ 59 ಮತ್ತು 51 ಹಾಗೂ Emblems and Names (Prevention of Improper Use) Act 1950 ಕಲಂ 3, 4 ಮತ್ತು 5ರ ಅನ್ವಯ ವಾಹನಗಳ ನೊಂದಣಿ ಫಲಕಗಳ ಮೇಲೆ ಅನಧಿಕೃತವಾಗಿ ಹೆಸರುಗಳನ್ನು, ಲಾಂಛನಗಳನ್ನು ಹಾಗೂ ಇತರೆ ಸಂಘ-ಸಂಸ್ಥೆಗಳ ಹೆಸರುಗಳನ್ನು ಹಾಕಿಕೊಳ್ಳುವುದು ಕಾನೂನು ಬಾಹಿರವಾಗಿದ್ದು, ಅಂತಹ ಫಲಕಗಳನ್ನು ತೆರವುಗೊಳಿಸುವಂತೆ ಹೇಳಿದ್ದಾರೆ.
ಅನಧಿಕೃತ ನೊಂದಣಿ ಫಲಕಗಳನ್ನು ಪ್ರದರ್ಶಿಸಿಕೊಂಡು ರಸ್ತೆಯಲ್ಲಿ ಓಡಾಡುವಂತಹ ವಾಹನಗಳನ್ನು ಗಮನಿಸಿರುವ ಕರ್ನಾಟಕ ಮಾನ್ಯ ಉಚ್ಛ ಚುನಾಯಿತ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ತಮ್ಮ ಖಾಸಗಿ ವಾಹನಗಳ ಮೇಲೆ ಯಾವುದೇ ಹೆಸರು, ಚಿನ್ಹೆ, ಲಾಂಛನ ಹಾಗೂ ಸಂಘ-ಸಂಸ್ಥೆಗಳ ಹೆಸರುಗಳನ್ನು ಹಾಕಿಕೊಳ್ಳುವುದು ನಿರ್ಬಂಧಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಭಾಪತಿಯವರಿಗೆ ಸೂಚಿಸಿದೆ.



