ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ (NWKRTC) ಖಾಲಿ ಇರುವ ಹುದ್ದೆಗಳ ಭರ್ತಿಗರ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ನವೆಂಬರ್ 10ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು https://cetonline.karnataka.gov.in/kea/indexnew ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.
Contents
ಅರ್ಹತೆ
ಅಭ್ಯರ್ಥಿಯು ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಬಿಕಾಂ, ಬಿಇ ಅಥವಾ ಬಿ.ಟೆಕ್ ಪದವಿ ಪಡೆದಿರಬೇಕು.
ವಯೋಮಿತಿ
ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷಗಳ ಒಳಗಿನವರು ಅರ್ಜಿ ಸಲ್ಲಿಸಬಹುದು.2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ ನೀಡಲಾಗಿದೆ.ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ ನೀಡಲಾಗಿದೆ.
ಅರ್ಜಿ ಶುಲ್ಕ
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ₹750.ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ₹500. ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ₹250.



