ಬೆಂಗಳೂರು : ರಾಜ್ಯ ಸರ್ಕಾರವು ಖಾಸಗಿ ಶಾಲಾ ವಿದ್ಯಾರ್ಥಿಗಳ ಪೋಷಕರಿಗೆ ಸಿಹಿಸುದ್ದಿ ನೀಡಿದ್ದು, ಸದ್ಯಕ್ಕೆ ಖಾಸಗಿ ಶಾಲೆಗಳಲ್ಲಿ ಫೀಸ್ ಕಟ್ಟದ ವಿದ್ಯಾರ್ಥಿಗಳಿಗೆ ಆನ್ ಲೈನ್ ಕ್ಲಾಸ್ ಸ್ಥಗಿತಗೊಳಿಸುವಂತಿಲ್ಲ ಎಂದು ಶಿಕ್ಷಣ ಇಲಾಖೆ ಆಯುಕ್ತ ಅನ್ನುಕುಮಾರ್ ತಿಳಿಸಿದ್ದಾರೆ.
ಖಾಸಗಿ ಶಾಲೆಗಳ ಶುಲ್ಕ ಕುರಿತಂತೆ ನಡೆದ ಶಿಕ್ಷಣ ಇಲಾಖೆಯ ಸಭೆಯ ಬಳಿಕ ಮಾತನಾಡಿದ ಅವರು, ಸದ್ಯ ಫೀಸ್ ಕಟ್ಟದ ವಿದ್ಯಾರ್ಥಿಗಳಿಗೆ ಖಾಸಗಿ ಶಾಲೆಗಳಲ್ಲಿ ಆನ್ ಲೈನ್ ಕ್ಲಾಸ್ ಸ್ಥಗಿತಗೊಳಿಸುವಂತಿಲ್ಲ. ಈ ಮೂಲಕ ಖಾಸಗಿ ಶಾಲಾ ಮಕ್ಕಳ ಪೋಷಕರಿಗೆ ನೆಮ್ಮದಿ ಸಿಕ್ಕಂತಾಗಿದೆ.
ರಾಜ್ಯದ ಖಾಸಗಿ ಶಾಲೆಗಳಲ್ಲಿ ಆನ್ ಲೈನ್ ಕ್ಲಾಸ್ ಮುಂದುವರಿಯಲಿದ್ದು, ಶುಲ್ಕ ಕಟ್ಟುವ ಬಗ್ಗೆ ಗೊಂದಲ ಮುಂದುವರೆದಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.



