Connect with us

Dvgsuddi Kannada | online news portal | Kannada news online

ಹಳೇ ಪಿಂಚಣಿ ಯೋಜನೆ ಜಾರಿಗೆ ಸಮಿತಿ ರಚಿಸಿ  ಸರ್ಕಾರ ಆದೇಶ

ಪ್ರಮುಖ ಸುದ್ದಿ

ಹಳೇ ಪಿಂಚಣಿ ಯೋಜನೆ ಜಾರಿಗೆ ಸಮಿತಿ ರಚಿಸಿ  ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲಾಗಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ಕೈಗೊಂಡ ಮುಷ್ಕರ ಹಿನ್ನೆಲೆ ಸರ್ಕಾರ, ಈ ಬಗ್ಗೆ ಪರಿಶೀಲಿಸಲು ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರವು ರಾಜ್ಯದಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದೆ. 01.04.2006 ರ ನಂತರ ಸರ್ಕಾರಿ ಸೇವೆಗೆ ಸೇರಿರುವ ನೌಕರರಿಗೆ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿಗೆ ತರಲಾಗಿರುತ್ತದೆ. ರಾಜ್ಯ ಸರ್ಕಾರಿ ನೌಕರರ ಸಂಘ, ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲು ಈ ಹಿಂದೆ ಜಾರಿಯಲ್ಲಿದ್ದ ಹಳೆಯ ಪಿಂಚಣಿ ಯೋಜನೆಯನ್ನು  ಜಾರಿಗೊಳಿಸುವಂತೆ ಆಗ್ರಹಿಸಿತ್ತು.

ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿ ಮಾಡಿರುವ ರಾಜ್ಯಗಳಲ್ಲಿ ಅನುಷ್ಠಾನಗೊಳಿಸಲು ಕೈಗೊಂಡಿರುವ ಕ್ರಮದ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲು ತೀರ್ಮಾನಿಸಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top