Connect with us

Dvgsuddi Kannada | online news portal | Kannada news online

ರಾಜ್ಯ ಸರ್ಕಾರದಿಂದ ದರ ಏರಿಕೆ ಶಾಕ್; ಪೆಟ್ರೋಲ್ 3 ರೂ., ಡೀಸೆಲ್ 3.50 ರೂ. ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ…!!!

petrol price

ಪ್ರಮುಖ ಸುದ್ದಿ

ರಾಜ್ಯ ಸರ್ಕಾರದಿಂದ ದರ ಏರಿಕೆ ಶಾಕ್; ಪೆಟ್ರೋಲ್ 3 ರೂ., ಡೀಸೆಲ್ 3.50 ರೂ. ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ…!!!

ಬೆಂಗಳೂರು: ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ದರ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ತೆರಿಗೆ ಏರಿಕೆ ನಂತರ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳ‌ವಾಗಲಿದೆ.

ಈ ಮೂಲಕ ತುಂಬಾ ದಿನಗಳ ನಂತರ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದುಬಾರಿಯಾಗಿದೆ.ಈ ಹಿಂದೆ ಪೆಟ್ರೋಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಶೇ 25.92 ರಷ್ಟಿತ್ತು. ಈಗ ಶೇ 3.9ರಷ್ಟು ಹೆಚ್ಚಳ ಮಾಡಲಾಗಿದ್ದು, ಶೇ 29.84 ಕ್ಕೆ ಏರಿಕೆಯಾಗಿದೆ.

ಡಿಸೇಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಈ‌ ಹಿಂದೆ ಶೇ 14.34 ರಷ್ಟಿತ್ತು. ಈಗ ಶೇ 4.1 ರಷ್ಟು ಹೆಚ್ಚಳ ಮಾಡಲಾಗಿದ್ದು, ಶೇ 18.44 ಕ್ಕೆ ಏರಿಕೆಯಾಗಿದೆ. ಪರಿಣಾಮವಾಗಿ ರಾಜ್ಯದಲ್ಲಿ ಪೆಟ್ರೋಲ್ ದರ 3 ರೂಪಾಯಿ ಹಾಗೂ ಡಿಸೇಲ್ ದರ 3.50 ರೂಪಾಯಿ ಹೆಚ್ಚಳವಾಗಲಿದೆ. ಪೆಟ್ರೋಲ್ ಹಾಗೂ ಡೀಸೆಲ್ ದರ ಹೆಚ್ಚಳ ತಕ್ಷಣದಿಂದಲೇ (ಜೂನ್ 15) ಜಾರಿಗೆ ಬರಲಿದೆ ಎಂದು ಸುತ್ತೋಲೆಯಲ್ಲಿ ಸರ್ಕಾರ ಉಲ್ಲೇಖಿಸಿದೆ.

ಬೆಂಗಳೂರಿನಲ್ಲಿ ಪ್ರಸ್ತುತ ಒಂದು ಲೀಟರ್ ಪೆಟ್ರೋಲ್ ದರ 99.84 ರೂ. ಆಗಿದ್ದು, ಡೀಸೆಲ್‌ ದರ ಲೀಟರ್‌ಗೆ 85.93 ರೂ. ಆಗಿದೆ. ಇದೀಗ ತೆರಿಗೆ ಹೆಚ್ಚಳದ ಬಳಿಕ ಪೆಟ್ರೋಲ್‌ ದರ ಲೀಟರ್‌ಗೆ 102.84 ರೂ. ಆಗಲಿದೆ. ಡೀಸೆಲ್‌ ದರ ಲೀಟರ್‌ಗೆ 89.43 ರೂ. ಆಗಲಿದೆ. ಸಾಗಾಟ ವೆಚ್ಚಕ್ಕನುಗುಣವಾಗಿ ದರ ವ್ಯತ್ಯಾಸವಾಗುವುದರಿಂದ ವಿವಿಧ ಜಿಲ್ಲೆಗಳಲ್ಲಿ ಮತ್ತು ಗ್ರಾಮೀಣ ಪ್ರದೇಶದಲ್ಲಿ ದರ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top