ದಾವಣಗೆರೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025-26ನೇ ಸಾಲಿನಲ್ಲಿ ಕರ್ನಾಟಕದ ಶಾಸನಬದ್ಧ ವಿಶ್ವವಿದ್ಯಾಲಯಗಳಲ್ಲಿ/ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಹೆಚ್.ಡಿ. ಅಧ್ಯಯನ ಮಾಡುತ್ತಿರುವ (ಫೆ.10, 2025 ಮತ್ತು ಅದರ ನಂತರ ಪ್ರಥಮ ವರ್ಷದ ಪಿಹೆಚ್.ಡಿ ಪ್ರಾರಂಭಿಸಿರಬೇಕು) ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗೆ ಸೇರಿದ ಹೊಸ ವಿದ್ಯಾರ್ಥಿಗಳಿಂದ ಮಾತ್ರ ಮಾಸಿಕ ವ್ಯಾಸಂಗ ವೇತನ/ಫೆಲೋಶಿಫ್ ಪಡೆಯಲು ಅರ್ಜಿ ಆಹ್ವಾನಿಸಿದೆ.
ಬೇಸಿಗೆ ಹಂಗಾಮಿನ ಬೆಳೆಗೆ ನೀರು: ಜ.2ರಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆ
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ದೃಢೀಕೃತ ದಾಖಲಾತಿಗಳನ್ನು ಲಗತ್ತಿಸಿ ದಿ: 09/12/2026 ರೊಳಗಾಗಿ ಸಲ್ಲಿಸುವಂತೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ದಾವಣಗೆರೆ: ಮತ್ತೆ ಅಡಿಕೆಗೆ ಭರ್ಜರಿ ಬೆಲೆ; ಕೇವಲ 10 ದಿನದಲ್ಲಿ 3 ಸಾವಿರ ಏರಿಕೆ
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂ.: 8050770004, ವೆಬ್‌ಸೈಟ್ https://bcwd.karnataka.gov.in, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿ ಸಂಪರ್ಕಿಸಿ.



