Connect with us

Dvgsuddi Kannada | online news portal | Kannada news online

ಸೋಮವಾರ ಶಿವಮೊಗ್ಗದಿಂದಲೇ ಪಿಎಂ ಕಿಸಾನ್ ಯೋಜನೆಯಡಿ ರೈತರ ಖಾತೆಗೆ ಹಣ ಜಮಾ ಮಾಡಲಿರುವ ಪ್ರಧಾನಿ ನರೇಂದ್ರ ಮೋದಿ

ಪ್ರಮುಖ ಸುದ್ದಿ

ಸೋಮವಾರ ಶಿವಮೊಗ್ಗದಿಂದಲೇ ಪಿಎಂ ಕಿಸಾನ್ ಯೋಜನೆಯಡಿ ರೈತರ ಖಾತೆಗೆ ಹಣ ಜಮಾ ಮಾಡಲಿರುವ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು; ಸೋಮವಾರ (ಫೆ.27) ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 13ನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗದಿಂದಲೇ ರೈತರ ಖಾತೆಗಳಿಗೆ ಹಣ ಜಮಾ ಮಾಡಲಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದರು.

ಬೆಂಗಳೂರಿನ ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು,ಈ ಬಾರಿ ರಾಜ್ಯದ 53 ಲಕ್ಷ ರೈತರ ಖಾತೆಗಳಿಗೆ ಕಿಸಾನ್ ಸನ್ಮಾನ್ ಹಣ ಜಮೆಯಾಗಲಿದೆ. ಬಿಜೆಪಿ ಸರಕಾರ ಕೃಷಿಯಲ್ಲಿ ಹಲವು ಮಹತ್ತರ ಬದಲಾವಣೆಗಳನ್ನು ತರುವ ಮೂಲಕ ರೈತರ ಆದಾಯ ವೃದ್ಧಿಗೆ ಕಠಿಬದ್ಧವಾಗಿ ಕಾರ್ಯನಿರ್ವಹಿಸುತ್ತಿದೆ.

ಈ ಬಾರಿ ಬಜೆಟ್‌ನಲ್ಲಿ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಹಾಗೂ ಸಾಲದ ಮೊತ್ತವನ್ನು 5 ಲಕ್ಷ ರೂ.ಗೆ ಏರಿಸಲಾಗಿದೆ. ಕೃಷಿಕರಿಗಾಗಿ ಹಲವು ಅಭಿವೃದ್ಧಿ ಪರ ಯೋಜನೆಗಳನ್ನು ರೂಪಿಸಿದೆ. ಜನಸ್ನೇಹಿ ಬಜೆಟ್ ರೂಪಿಸಿರುವ ಬಿಜೆಪಿ ಸರ್ಕಾರ ಕಿರು ಧಾನ್ಯ ಗಳ ಬೆಳೆಗಳಿಗೆ 10 ಸಾವಿರ ರೂ. ಪ್ರೋತ್ಸಾಹ ಧನ ನೀಡುತ್ತಿದೆ. ಸಿರಿಧಾನ್ಯಕ್ಕೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಸಾಕಷ್ಟು ಉತ್ತೇಜನ ನೀಡುತ್ತಿವೆ. ಕೃಷಿ ಮತ್ತು ಪೂರಕ ಚಟುವಟಿಕೆಗಳ ವಲಯಕ್ಕೆ 2023-24ನೇ ಸಾಲಿನಲ್ಲಿ ಒಟ್ಟಾರೆಯಾಗಿ 39,031 ಕೋಟಿ ರೂ. ಅನುದಾನ ಒದಗಿಸಲಾಗಿದೆ ಎಂದರು.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top