ಬೆಂಗಳೂರು: ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದ್ದು, ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪಿಎಸ್ ಐನಿಂದ ಕಾನ್ ಸ್ಟೇಬಲ್ ವರೆಗೆ 23 ಸಾವಿರ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ವಿಧಾನಪರಿಷತ್ ನಲ್ಲಿ ಪ್ರಶ್ನೋತ್ತರದ ಅವಧಿಯಲ್ಲಿ ಸದಸ್ಯ ಎಸ್. ರವಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಳೆದ 2 ವರ್ಷಗಳಿಂದ ದೊಡ್ಡ ಪ್ರಮಾಣದಲ್ಲಿ ನೇಮಕಾತಿ ನಡೆದಿದೆ. ಪಿಎಸ್ ಐನಿಂದ ಕಾನ್ ಸ್ಟೇಬಲ್ ವರೆಗೆ 15 ಸಾವಿರ ಹುದ್ದೆ ಭರ್ತಿ ಮಾಡಿಕೊಳ್ಳಲಾಗಿದೆ.ಶೀಘ್ರವೇ 23 ಸಾವಿರ ಹುದ್ದೆಗಳ ನೇಮಕಾತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ಪೊಲೀಸ್ ಕಾನ್ ಸ್ಟೇಲ್ ಹುದ್ದೆಗಳನ್ನು ಸಂಪೂರ್ಣವಾಗಿ ಭರ್ತಿ ಮಾಡಿದ ಪೊಲೀಸರಿಗೆ ಪಾಳಿ ಕರ್ತವ್ಯದ ವ್ಯವಸ್ಥೆಯನ್ನು ಜಾರಿಗೆ ತರುವ ಕುರಿತು ಕ್ರಮ ಕೈಗೊಳ್ಳವುದಾಗಿ ಭರವಸೆ ನೀಡಿದರು.