ಬೆಂಗಳೂರು: ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ. ಒಂದು ವೇಳೆ ಬರೆಸಿದ್ದರೆ ಅದು ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ದಾವಣಗೆರೆ: ಬೃಹತ್ ಉದ್ಯೋಗ ಮೇಳ, 50 ಕ್ಕೂ ಹೆಚ್ಚು ಕಂಪನಿಗಳು ಭಾಗಿ, ಈ ಲಿಂಕ್ ಮೂಲಕ ಹೆಸರು ನೋಂದಣಿ ಮಾಡಿ
ಶ್ರವಣ ಬೆಳಗೊಳದ ಶಾಸಕ ಬಾಲಕೃಷ್ಣ ಸಿಎನ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಅವರು, ರಾಜ್ಯದ ಪೊಲೀಸ್ ಇಲಾಖೆಯ ಅಧಿಕಾರಿಗಳು ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸಿಕೊಂಡು ಸಂಚಾರ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಹೇಳಿದರು.
ದಾವಣಗೆರೆ: ರೈತ ಮಕ್ಕಳಿಗೆ ತೋಟಗಾರಿಕೆ ತರಬೇತಿ
ತಮ್ಮ ಸ್ವಂತ ವಾಹನಗಳ ಮೇಲೆ ಪೊಲೀಸ್ ಎಂದು ಬರೆಯಿಸಿಕೊಂಡಿರುವುದು ಗೃಹ ಇಲಾಖೆಯ ಗಮನಕ್ಕೆ ಬಂದಿದೆ. ಸ್ವಂತ ವಾಹನದ ಮೇಲೆ ಪೊಲೀಸ್ ಅಧಿಕಾರಿಗಳು ಹಾಗೂ ನೌಕರರು ಪೊಲೀಸ್ ಎಂದು ಬರೆಸಿದ್ದರೆ ಅವರ ವಿರುದ್ಧ 2022 ರ ಸರ್ಕಾರದ ಸುತ್ತೋಲೆ ಪ್ರಕಾರ ಕಾನೂನು ಕ್ರಮ ಆಗುತ್ತದೆ ಎಂದು ತಿಳಿಸಿದ್ದಾರೆ.



