Connect with us

Dvgsuddi Kannada | online news portal | Kannada news online

ಬಿಜೆಪಿ ಶಕ್ತಿ ಕುಗ್ಗಿಸಲು ವಿಜಯೇಂದ್ರ ಆರ್ ಜೆಡಿ, ಕಾಂಗ್ರೆಸ್ ಗೆ ಹಣ ನೀಡಿಕೆ: ಯತ್ನಾಳ್ ಹೊಸ ಬಾಂಬ್

ರಾಜಕೀಯ

ಬಿಜೆಪಿ ಶಕ್ತಿ ಕುಗ್ಗಿಸಲು ವಿಜಯೇಂದ್ರ ಆರ್ ಜೆಡಿ, ಕಾಂಗ್ರೆಸ್ ಗೆ ಹಣ ನೀಡಿಕೆ: ಯತ್ನಾಳ್ ಹೊಸ ಬಾಂಬ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಶಕ್ತಿ ಕುಗ್ಗಿಸಲು ಸಿಎಂ ಪುತ್ರ ವಿಜಯೇಂದ್ರ ಬಿಹಾರ ಚುನಾವಣೆಯಲ್ಲಿ ಫಂಡಿಂಗ್ ಮಾಡಿದ್ದಾರೆ. ಆರ್ ಜೆಡಿ, ಕಾಂಗ್ರೆಸ್ ಗೆ ವಿಜಯೇಂದ್ರ ಫಂಡಿಂಗ್ ಮಾಡಿದ್ದಾರೆ ಎಂದು ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ವರಿಷ್ಠರು ನೀಡಿದ್ದ ನೋಟಿಸ್ ಗೆ 11 ಪುಟಗಳಷ್ಟು ಉತ್ತರ ನೀಡಿದ್ದೇನೆ. ಸಿಎಂ ಬಿಎಸ್ ಯಡಿಯೂರಪ್ಪ ಕುಟುಂಬದ ಬಗ್ಗೆ ಬರೆದಿದ್ದೇನೆ ಎಂದರು. ಈ ಮೂಲಕ ವಿಜಯೇಂದ್ರ ವಿರುದ್ಧ ಗಂಭೀರ ಆರೋಪಿಸಿದ್ದಾರೆ.

ವಿಜಯೇಂದ್ರ ಮಾರಿಷಸ್ ಗೆ ಯಾಕೆ ಹೋಗಿದ್ದರು. ಮಾರಿಷಸ್ ಗೆ ಯಾವ ವಿಮಾನದಲ್ಲಿ ಹೋಗಿದ್ದರು, ಆ ವಿಮಾನದ ನಂಬರ್ ಕೂಡ ಬರೆದಿದ್ದೇನೆ. ಎಷ್ಟು ಜನ ಹೋಗಿದ್ದರು ಎಂಬ ವಿಚಾರ ಕೂಡಾ ಬರೆದಿದ್ದೇನೆ. ಮಾಜಿ ಗೃಹ ಸಚಿವರೊಬ್ಬರ ಪಿಎ ಮೂಲಕ ಮಾರಿಷಸ್ ಗೆ ಏನೇನು ತೆಗೆದುಕೊಂಡು ಹೋಗಿದ್ದಾರೆ ಎನ್ನುವುದನ್ನು ಉಲ್ಲೇಖಿಸಿದ್ದೇನೆ. ಇದರ ತನಿಖೆ ಮಾಡಲು‌ ಆಗ್ರಹಿಸಿದ್ದೇನೆ.

ಯಡಿಯೂರಪ್ಪ ಕುಟುಂಬ ಬಿಜೆಪಿ ಶಾಸಕರನ್ನು ಗೌರವಿಸುತ್ತಿಲ್ಲ. ಬಿಜೆಪಿ ಆಶಯಕ್ಕೆ ತಕ್ಕಂತೆ ಅಧಿಕಾರ ನಡೆಸುತ್ತಿಲ್ಲ. ಯಡಿಯೂರಪ್ಪ ಅವರ ಕುಟುಂಬದ ಬಗ್ಗೆ ತನಿಖೆಗೆ ಒತ್ತಾಯಿಸಿದ್ದೇನೆ. ಸಿಡಿ ಬಗ್ಗೆಯೂ ಉಲ್ಲೇಖಿಸಿದ್ದೇನೆ, ಇಡಿ ಬಗ್ಗೆಯೂ ಉಲ್ಲೇಖಿಸಿದ್ದೇನೆ. ಬಿಹಾರದ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಎಷ್ಟು ಹಣ ಕಳುಹಿಸಿದ್ದಾರೆ, ವಿಜಯೇಂದ್ರ ಅವರ ಆಪ್ತರ ಮೂಲಕ ಹಣ ಎಷ್ಟು ಕಳುಹಿಸಿದ್ದರು ಎಂಬುದರ ಬಗ್ಗೆ ತನಿಖೆಯಾಗಬೇಕು. ಭ್ರಷ್ಟಾಚಾರ, ಹಸ್ತಕ್ಷೇಪ, ವರ್ಗಾವಣೆ ದಂಧೆ ಬಗ್ಗೆ ತನಿಖೆ ಮಾಡಬೇಕು ಎಂದು ಪತ್ರದಲ್ಲಿ ಹೇಳಿದ್ದೇನೆ ಎಂದರು.

11ಪುಟಗಳ ಪತ್ರದಲ್ಲಿ 45 ಪ್ಯಾರ ಇದೆ, ಪ್ರತಿ ಪ್ಯಾರದ ವಿಚಾರಗಳನ್ನು ಹಂತ ಹಂತವಾಗಿ ಮಾಧ್ಯಮದ ಮುಂದೆ ಹೇಳುತ್ತೇನೆ ಎಂದ ಯತ್ನಾಳ್, ನೋಟೀಸ್ ಗೆ ಉತ್ತರ ಕೊಡುವಾಗ ನಾನು ಪತ್ರದಲ್ಲಿ ಎಲ್ಲೂ ಕ್ಷಮೆ ಯಾಚಿಸಿಲ್ಲ ಎಂದು ಹೇಳಿದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ರಾಜಕೀಯ

To Top