ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇದೇ 5, 6 ರಂದು ಚಿತ್ರದುರ್ಗ, ದಾವಣಗೆರೆ ಮತ್ತು ತುಮಕೂರು ಜಿಲ್ಲೆಗಳಲ್ಲಿ ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ರಾಜ್ಯ ಬಿಜೆಪಿ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ, ನಾಳೆ (ಜ.5) ಮಧ್ಯಾಹ್ನ ತುಮಕೂರು ಮತ್ತು ಮಧುಗಿರಿಯ ಶಕ್ತಿ ಕೇಂದ್ರಗಳ ಪ್ರಮುಖರ ಸಭೆಯಲ್ಲಿ ಭಾಗವಹಿಸುವರು. ನಂತರ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ. ಚಿತ್ರದುರ್ಗದಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಕಾರ್ಯಕರ್ತ ಸಮಾವೇಶದಲ್ಲಿ ಭಾಗವಹಿಸುವರು. ಇದಾದ ನಂತರ ಮಾದಾರ ಚೆನ್ನಯ್ಯ ಗುರುಪೀಠ, ಸಿರಿಗೆರೆ ಮತ್ತು ತರಳಬಾಳು ಮಠಕ್ಕೆ ಭೇಟಿ ನೀಡುವರು.
ಜ.6 ರಂದು ಹರಿಹರದ ಪಂಚಮಸಾಲಿ ಮಠ, ಬೆಳ್ಳುಡಿಯ ಕನಕಗುರುಪೀಠ, ರಾಜನಹಳ್ಳಿಯ ವಾಲ್ಮೀಕಿ ಗುರುಪೀಠಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಬೂತ್ ವಿಜಯ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ ತುಮಕೂರು ಜಿಲ್ಲೆ ಸಿರಾದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವರು. ಈ ಸಂದರ್ಭದಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭಾಗವಹಿಸುವರು.



