ಬೆಂಗಳೂರು: ಪಕ್ಷದ ಶಿಸ್ತು ಕ್ರಮ ಉಲ್ಲಂಘಿಸಿ ನಾಯಕತ್ವದ ವಿರುದ್ಧ ಪದೇ ಪದೇ ಹೇಳಿಕೆ ಕೊಡುತ್ತಿರುವ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್‍ಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲು ಬಿಜೆಪಿ ತೀರ್ಮಾನಿಸಲಾಗಿದೆ.
ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು, ಯತ್ನಾಳ್ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಕೂಡಲೇ ಅವರಿಗೆ ಕಾರಣ ಕೇಳಿ ನೋಟಿಸ್ ಕೊಡಬೇಕೆಂದು ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್‍ಗೆ ಸೂಚನೆ ನೀಡಿದ್ದಾರೆ .
ಶಿವಮೊಗ್ಗದಲ್ಲಿ ನಿನ್ನೆ ರಾತ್ರಿ ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಯತ್ನಾಳ್ ಹೇಳಿಕೆ ಬಗ್ಗೆ ಪ್ರಮುಖರು ಚರ್ಚೆ ನಡೆಸಿದ್ದಾರೆ. ಯಾರು ಎಷ್ಟೇ ದೊಡ್ಡವರಿರಲಿ, ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ.
ಕೂಡಲೇ ಅವರಿಗೆ ನೋಟೀಸ್ ಜಾರಿ ಮಾಡಬೇಕೆಂದು ಅರುಣ್ ಸಿಂಗ್ , ಕಟೀಲ್‍ಗೆ ಸೂಚನೆ ನೀಡಿದ್ದಾರೆ ಎನ್ನಲಾಗುತ್ತಿದೆ.
ಯತ್ನಾಳ್ ಅವರಿಂದ ಸಮರ್ಪಕ ಉತ್ತರ ನೀಡದಿದ್ದರೆ ಶಿಸ್ತು ಕ್ರಮ ಜರುಗಿಸಲು ಹಿಂದೆ ಮುಂದೆ ನೋಡಬಾರದೆಂದು ಸೂಚನೆ ಕೊಟ್ಟಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪದೇ ಪದೇ ಹೇಳಿಕ ನೀಡುತ್ತಿದ್ದಾರೆ.
ಜನವರಿ 14 ರಂದು ಬರುವ ಸಂಕ್ರಾಂತಿ ಹಬ್ಬಕ್ಕೂ ಮೊದಲು ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ ಬೇರೊಬ್ಬರನ್ನು ನೇಮಕ ಮಾಡಲಾಗುತ್ತದೆ ಎಂದು ಅವರು ಇತ್ತೀಚಿನ ಹೇಳಿಕೆಯೊಂದನ್ನು ನೀಡಿದ್ದರು.