ವಿಜಯಪುರ: ಸಿಂದಗಿ ವಿಧಾನಸಭೆಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಜಯಭೇರಿ ಬಾರಿಸಿದ್ದಾರೆ. ಇನ್ನು ಅಧಿಕೃತ ಘೋಷಣೆಯಷ್ಟೇ ಬಾಕಿ ಉಳಿದಿದೆ.
ಜೆಡಿಎಸ್ನಿಂದ ನಾಜಿಯಾ ಅಂಗಡಿ, ಕಾಂಗ್ರೆಸ್ ಪಕ್ಷದಿಂದ ಅಶೋಕ್ ಮನಗೂಳಿ ಕಣಕ್ಕಿಳಿದಿದ್ದರು. ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ ಠೇವಣಿಯನ್ನೂ ಗಳಿಸದೇ ಸೋಲನ್ನೊಪ್ಪಿದ್ದಾರೆ. ತೀವ್ರ ಜಿದ್ದಾಜಿದ್ದಿಯಿಂದ ಕೂಡಿದ್ದ ಫಲಿತಾಂಶದಲ್ಲಿ ಆಡಳಿತರೂಢ ಬಿಜೆಪಿ ಪಕ್ಷದ ಅಭ್ಯರ್ಥಿ ರಮೇಶ್ ಭೂಸನೂರ ಭಾರೀ ಅಂತರದಲ್ಲಿ ಗೆದ್ದಿದ್ದಾರೆ. ಹದಿನೆಂಟನೇ ಸುತ್ತಿನ ಬಳಿಕ ಬಿಜೆಪಿ 27383 ಮತಗಳ ಮುನ್ನಡೆ ಸಾಧಿಸಿದೆ. ಆರಂಭದಿಂದಲೂ ಭರ್ಜರಿ ಮುನ್ನಡೆಯನ್ನು ಬಿಜೆಪಿ ಕಾಯ್ದುಕೊಂಡಿದೆ. ಬಿಜೆಪಿ 80020, ಕಾಂಗ್ರೆಸ್ 52637, ಜೆಡಿಎಸ್ 3428 ಮತ ಪಡೆದಿವೆ. ಅಕ್ಟೋಬರ್ 30 ರಂದು ಉಪಚುನಾವಣೆ ನಡೆದಿತ್ತು.