ಬೆಂಗಳೂರು : ಸಿಎಂ ಬಿ.ಎಸ್ . ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಅಬಕಾರಿ ಸಚಿವರಾಗಿದ್ದ ಸಚಿವ ಹೆಚ್.ನಾಗೇಶ್ ರಾಜೀನಾಮೆ ನಂತರ ಇದೀಗ ಡಾ. ಅಂಬೇಡ್ಕರ್ ಅಭಿವೃದ್ಧಿ ನಿಗಮ ಅಧ್ಯಕ್ಷ ಸ್ಥಾನ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಸಿಎಂ ಯಡಿಯೂರಪ್ಪ ಅವರ ಮುಂದೆಯೇ ಅಬಕಾರಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತ ಸಂದರ್ಭದಲ್ಲಿ ಹೆಚ್ ನಾಗೇಶ್ ತಮ್ಮ ಅಸಮಾಧಾನ ವ್ಯಕ್ತ ಪಡಿಸಿದ್ದರು.ಈ ವೇಳೆ ಹೆಚ್ ನಾಗೇಶ್ ಅವರನ್ನು ಸಮಾಧಾನ ಮಾಡುವ ಸಲುವಾಗಿ ಸಿಎಂ ಯಡಿಯೂರಪ್ಪ ಅವರು, ನಾಗೇಶ್ ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಿದ್ದಾರೆ.



