ಬೆಂಗಳೂರು: ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಬಂದ ಹಿನ್ನಲೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿ ಹೊಳಿ ಅವರು ಸಿಎಂ ಯಡಿಯೂರಪ್ಪ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ನಿನ್ನೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ಸಿಡಿ ಬಿಡುಗಡೆ ಮಾಡಿದ ನಂತರ ರಾಜ್ಯ ರಾಜಕಾರಣದಲ್ಲಿ ಸಂಚಲನ ಉಂಟು ಮಾಡಲಾಗಿತ್ತು. ಪ್ರತಿ ಪಕ್ಷಗಳು ಸಚಿವರ ರಾಜೀನಾಮೆಗೆ ಆಗ್ರಹಿಸಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗಿತ್ತು.
ಈ ಪ್ರಕಣದಿಂದ ಪಕ್ಷಕ್ಕೆ ಆಗುವ ಮುಜುಗರ ತಪ್ಪಿಸಲು ರಾಜೀನಾಮೆ ಸಲ್ಲಿಸಿದ್ದೇನೆ ಎಂದು ರಮೇಶ್ ಜಾರಕಿ ಹೊಳಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಪ್ರಕರಣದಲ್ಲಿ ನಿರ್ದೋಷಿಯಾದ ಬಳಿಕ ಸಚಿವ ಸ್ಥಾನ ನೀಡಿ ಎಂದು ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.



