ದಾವಣಗೆರೆ: ಈಗಾಗಲೇ ಸಾಕಷ್ಟು ಭಾರಿ ಡಿಸಿಎಂ ಡಿ.ಕೆ. ಶಿವಕುಮಾರ್ ಪರ ಮಾತನಾಡಿದ ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ, ಮತ್ತೊಮ್ಮೆ ಡಿಸಿಎಂ ಪರ ಬ್ಯಾಟ್ ಬೀಸಿದ್ದಾರೆ. ಸದ್ಯ ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಹುದ್ದೆ ಒಲಿದಿದೆ. ಈ ಕುರ್ಚಿ ಖಾಲಿಯಾದ ತಕ್ಷಣ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಅಗಲಿದ್ದಾರೆ ಎಂದು ತಿಳಿಸಿದರು.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ, ಚುನಾವಣೆ ಬಳಿಕ ಕೆಲ ಬೆಳವಣಿಗೆಯಲ್ಲಿ ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಹುದ್ದೆ ಒಲಿದು ಬಂದಿದೆ. ಕುರ್ಚಿ ಖಾಲಿಯಾದ ತಕ್ಷಣ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲಿದ್ದಾರೆ. ಈ ವಿಷಯದಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹೇಳಿದ್ದಾರೆ.
ಫಲಿತಾಂಶ ಬಳಿಕ ಡಿ.ಕೆ.ಶಿವಕುಮಾರ್ ಐದು ವರ್ಷಗಳ ಅವಧಿಗೆ ಮುಖ್ಯಮಂತ್ರಿ ಆಗಬೇಕಿತ್ತು. ಅವರು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರುವಲ್ಲಿ ಅವರ ಪಾತ್ರ ದೊಡ್ಡದಿದೆ. ಇದಲ್ಲದೆ ಉಪ ಚುನಾವಣೆಯಲ್ಲಿಯೂ ಮೂರು ಕ್ಷೇತ್ರ ಗೆಲುವು ತಂದುಕೊಡುವಲ್ಲಿ ಶ್ರಮಿಸಿದ್ದಾರೆ. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ ಎಂದರು.
ಶೀಘ್ರವೇ ಜೆಡಿಎಸ್‌ನ 11 ಶಾಸಕರು ಕಾಂಗ್ರೆಸ್‌ಗೆ ಸೇರಲು ಸಜ್ಜಾಗಿದ್ದಾರೆ. ಪಕ್ಷದ ಹಿತದೃಷ್ಟಿಯಿಂದ ಎಲ್ಲರನ್ನು ಒಗ್ಗೂಡಿಸುವ ಕೆಲಸವನ್ನು ಡಿ.ಕೆ.ಶಿವಕುಮಾರ್ ಮಾಡುತ್ತಿದ್ದಾರೆ. ಅವರು ಮಾತಿಗಿಂತ ಹೆಚ್ಚು ಕೆಲಸ ಮಾಡಿದ್ದಾರೆ. ಅವರ ಕಾರ್ಯವೈಖರಿಗೆ ಒಳ್ಳೆಯ ದಿನಗಳು ಬರಲಿವೆ ಎಂದರು.