ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಚರ್ಚೆ ನಡುವೆಯೇ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಿರೀಕ್ಷಿತವಾಗಿ ಭೇಟಿ ಮಾಡಿದ್ದಾರೆ.ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಲು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿದ್ದರು ಇದೇ ವೇಳೆ ಮಂಗಳೂರಿಗೆ ತೆರಳಲು ಆಗಮಿಸಿದ್ದ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಇವರ ಧರ್ಮಪತ್ನಿ ಚನ್ನಮ್ಮ ಅವರು ಅನಿರೀಕ್ಷಿತವಾಗಿ ಮುಖಾಮುಖಿಯಾದರು.ಈ ವೇಳೆ ಸಿದ್ದರಾಮಯ್ಯ ದೇವೇಗೌಡ ಮತ್ತು ಚನ್ನಮ್ಮ ಅವರ ಆರೋಗ್ಯ ವಿಚಾರಿಸಿದರು. ಬಳಿಕ ದೇವೇಗೌಡರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಶಲೋಪರಿ ವಿಚಾರಿಸಿದರು.
ಸಿಎಂ ಸಿದ್ದರಾಮಯ್ಯ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅನಿರೀಕ್ಷಿತ ಭೇಟಿ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



