ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಕುರಿತು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರೊಂದಿಗೆ ಚರ್ಚೆ ನಡೆಸುವುದಾಗಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದರು.
ಗೃಹ ಕಚೇರಿ ಕೃಷ್ಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಶಿವಮೊಗ್ಗ ದಲ್ಲಿ ಕೋರ್ ಕಮಿಟಿ ಹಾಗೂ ನಾಳೆ ಪಕ್ಷದ ರಾಜ್ಯ ವಿಶೇಷ ಕಾರ್ಯಕಾರಣಿ ಸಭೆ ನಡೆಯಲಿದೆ. ಆ ಸಭೆಯಲ್ಲಿ ಅರುಣ್ ಸಿಂಗ್ ಭಾಗವಹಿಸಲಿದ್ದು, ಎರಡು ದಿನಗಳ ಸಭೆ ಮುಗಿಸಿ ನಾಳೆ ಮತ್ತೆ ಬೆಂಗಳೂರಿಗೆ ಬರುತ್ತೇನೆ ಎಂದು ಮುಖ್ಯಮಂತ್ರಿ ಹೇಳಿದರು.