Connect with us

Dvgsuddi Kannada | online news portal | Kannada news online

ಮುಂದಿನ ಎಲ್ಲಾ ಚುನಾವಣೆಯಲ್ಲಿ ಗೆಲ್ಲೋದು ನಾವೇ; ಸಿದ್ದರಾಮಯ್ಯಗೆ ಸವಾಲು ಹಾಕಿದ ಸಿಎಂ ಯಡಿಯೂರಪ್ಪ

ರಾಜಕೀಯ

ಮುಂದಿನ ಎಲ್ಲಾ ಚುನಾವಣೆಯಲ್ಲಿ ಗೆಲ್ಲೋದು ನಾವೇ; ಸಿದ್ದರಾಮಯ್ಯಗೆ ಸವಾಲು ಹಾಕಿದ ಸಿಎಂ ಯಡಿಯೂರಪ್ಪ

 ಬೆಂಗಳೂರು: ನೀವು ಎಷ್ಟೇ ಟೀಕೆ ಮಾಡಿದರೂ ಮುಂಬರು ಎರಡು ವಿಧಾನಸಭೆ ಉಪ ಚುನಾವಣೆ,  ಒಂದು  ಲೋಸಭಾ ಉಪಚುನಾವಣೆಯಲ್ಲಿ ಬಿಜೆಪಿ ಭಾರೀ ಬಹುಮತದಲ್ಲಿ ಗೆಲುವ ಸಾಧಿಸಲಿದೆ. ಜನ ಕಾಂಗ್ರೆಸ್ ಜತೆ ಇಲ್ಲ. ಇತ್ತೀಚಿನ ಎಲ್ಲಾ ಚುನಾವಣೆಯಲ್ಲಿಯೂ ಕಾಂಗ್ರೆಸ್ ಸೋತಿದೆ.  ಇದಲ್ಲದೆ ಮುಂಬರುವ ಸಾರ್ವಜನಿಕ ಚುನಾವಣೆಯಲ್ಲಿಯೂ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಸಿಎಂ ಯಡಿಯೂರಪ್ಪ, ಸಿದ್ದರಾಮಯ್ಯಗೆ ಸವಾಲು ಹಾಕಿದರು. ರಾಜ್ಯದಲ್ಲಿ ನಾಳೆ ಮತ್ತೆ ರೈತ ಹೋರಾಟ; ರಾಜ್ಯ, ರಾಷ್ಟ್ರೀಯ ಹೆದ್ದಾರಿ ಬಂದ್

ಪ್ರವಾಹಕ್ಕೆ ಸಿಕ್ಕಿ ಸಂಕಷ್ಟದಲ್ಲಿದ್ದ ಜಿಲ್ಲೆಗಳಿಗೆ 914 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಏಕಾಂಗಿಯಾಗಿ ನೆರೆ ಸಂಕಷ್ಟಕ್ಕೆ ಸ್ಪಂದಿಸಿದ್ದೇನೆ. ಅಧಿಕಾರದಲ್ಲಿ ಇದ್ದಾಗ ಸವಾಲು ಎದುರಿಸಿದ್ದೇನೆ, ಸವಾಲುಗಳು ನನ್ನನ್ನ ಇನ್ನಷ್ಟು ಗಟ್ಟಿಗೊಳಿಸಿವೆ ಎಂದರು.

ಸಿದ್ದರಾಮಯ್ಯ ಮನಸ್ಸಿಗೆ ಬಂದಂತೆ ಮಾತನಾಡಿದ್ದಾರೆ ಅವರಿಂದ ಅಭಿವೃದ್ಧಿ ಬಗ್ಗೆ ಮಾತ್ರ ಟೀಕೆ ನಿರೀಕ್ಷಿಸಿದ್ದೆವು. ಆದರೆ ಅವರು ಸರ್ಕಾರದ ಬಗ್ಗೆ ಮಾತನಾಡಿದ್ದಾರೆ. ಹೀಗಾಗಿ ನಾನು ಈ ಬಗ್ಗೆ ಮಾತನಾಡುವುದು ಅನಿವಾರ್ಯ. ಕಾಂಗ್ರೆಸ್ ಗೆ ಬಹುಮತವಿಲ್ಲದಿದ್ದರೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆ ಮಾಡಿದರು. ಬಳಿಕ ಯಾವ ರೀತಿ ಆಡಳಿತ ನಡೆಸಿದರು ಎಂಬುದು ರಾಜ್ಯಕ್ಕೆ ಗೊತ್ತಿರುವ ವಿಚಾರ. ಮೈತ್ರಿ ಸರ್ಕಾರದಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡಿದ್ದೆ, ಕಿರುಕುಳ ಅನುಭವಿಸಿದ್ದೆ ಎಂದು ಕುಮಾರಸ್ವಾಮಿಯವರೇ ಹೇಳಿದ್ದಾರೆ ಎಂದರು .

ಸಿದ್ದರಾಮಯ್ಯನವರೇ ನೀವು ಏನು ಹೋಳುತ್ತಿರೋ ಅದೆಲ್ಲವನ್ನೂ ಮಾಡುವ ಶಕ್ತಿ ನಮಗಿದೆ. ಹಲವು ಸವಾಲುಗಳನ್ನು ಎದುರಿಸಿ ಬಂದಿದ್ದೇನೆ. ಸವಾಲುಗಳನ್ನು ಎದುರಿಸಿಯೇ ನಾನು ಗಟ್ಟಿಯಾಗಿದ್ದೇನೆ. ಲೋಕಸಭಾ ಚುನಾವಣೆಯಿಂದ ಕಾಂಗ್ರೆಸ್ ಸೋಲನುಭವಿಸಿದೆ. ಉಪಚುನಾವಣೆಯಲ್ಲೂ ಬಿಜೆಪಿ ಗೆಲುವು ಸಾಧಿಸಿದೆ. ಮುಂದಿನ ಮೂರು ಉಪಚುನಾವಣೆಯಲ್ಲೂ ಗೆಲುವು ನಮ್ಮದೇ. ಈ ಬಗ್ಗೆ ಸದನದಲ್ಲಿ ಸವಾಲು ಹಾಕುತ್ತೇನೆ ಎಂದು ಸಿಎಂ ಹೇಳಿದರು.

ಇದಕ್ಕೆ ಕೋಪಗೊಂಡ ಸಿದ್ದರಾಮಯ್ಯ ನಾವು ಅಧಿಕಾರದಲ್ಲಿದ್ದಾಗ ನೀವು ಚುನಾವಣೆಗಳಲ್ಲಿ ಸೋತಿರಲಿಲ್ಲವೇ ಎಂದು ಪ್ರಶ್ನಿಸಿದರು. ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಯಡಿಯೂರಪ್ಪ ಇತ್ತೀಚಿನ ಚುನಾವಣೆಗಳಲ್ಲಿ ಕಾಂಗ್ರೆಸ್ ದಯನೀಯ ಸೋಲನುಭವಿಸಿದೆ. ಈ ಚುನಾವಣೆಯಿಂದ ನಾಯಕತ್ವವನ್ನೇ ಕಳೆದುಕೊಂಡಿದೆ ಎಂದರು.

ಇದಕ್ಕೆ ಉತ್ತರಿಸಿದ ಸಿದ್ದರಾಮಯ್ಯ ಹಾಗಿದ್ದರೆ ಸರ್ಕಾರ ವಿಸರ್ಜನೆ ಮಾಡಿ. ಎಲ್ಲರೂ ಮತ್ತೆ ಚುನಾವಣೆ ಎದುರಿಸೋಣ. ಆ ವೇಳೆ ಯಾರು ಅಧಿಕಾರಕ್ಕೆ ಬರಲಿದ್ದಾರೆ ನೋಡೋಣ ಎಂದರು. ಇದೇ ವೇಳೆ ಆಡಳಿತ ಹಾಗೂ ವಿಪಕ್ಷ ಸದಸ್ಯರ ನಡುವೆ ಗದ್ದಲ-ಕೋಲಾಹಲ ಉಂಟಾಯಿತು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ರಾಜಕೀಯ

Advertisement

ದಾವಣಗೆರೆ

Advertisement
To Top
(adsbygoogle = window.adsbygoogle || []).push({});