Connect with us

Dvgsuddi Kannada | online news portal | Kannada news online

ಕೃಷಿ ಮಸೂದೆ ವಿರೋಧಿಸಿ ಕೈ ನಾಯಕರ ಬೃಹತ್ ಪ್ರತಿಭಟನೆ; ಡಿಕೆಶಿ, ಸಿದ್ದರಾಮಯ್ಯ ವಶಕ್ಕೆ ಪಡೆದ ಪೊಲೀಸ್

ರಾಜಕೀಯ

ಕೃಷಿ ಮಸೂದೆ ವಿರೋಧಿಸಿ ಕೈ ನಾಯಕರ ಬೃಹತ್ ಪ್ರತಿಭಟನೆ; ಡಿಕೆಶಿ, ಸಿದ್ದರಾಮಯ್ಯ ವಶಕ್ಕೆ ಪಡೆದ ಪೊಲೀಸ್

ಬೆಂಗಳೂರು; ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಾಂಗ್ರೆಸ್​ ಪಜ್ಷದಿಂದ ಇಂದು ರಾಜಭವನ ಚಲೋ ರ್ಯಾಲಿ ನಡೆಸಲಾಯಿತು. ಬೆಂಗಳೂರು ಮೆಜೆಸ್ಟಿಕ್​ನಿಂದ ಆರಂಭವಾದ ರ್ಯಾಲಿ ರಾಜಭವನದತ್ತ ಹೊರಟಿತು. ರಾಜಭವನ ಮುತ್ತಿಗೆ ಹಾಕಲು ಹೊರಟ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ತಡೆದರು. ಬಳಿಕ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದರು. ವಶಕ್ಕೆ ಪಡೆದ ಕೈ ಕಾರ್ಯಕರ್ತರನ್ನು ಬಿಎಂಟಿಸಿ ಬಸ್ ನಲ್ಲಿ ಕರೆದುಕೊಂಡು ಹೋಗಲಾಯಿತು. ಬಳಿಕ ಕಾಂಗ್ರೆಸ್ ಮುಖಂಡರಾದ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಪರಮೇಶ್ವರ್ ಅವರನ್ನು ಬಂಧಿಸಲಾಯಿತು.

ಕಾಂಗ್ರೆಸ್ ರ್ಯಾಲಿ ಮೆಜೆಸ್ಟಿಕ್​ನ ಕೆಎಸ್‌ಆರ್ ರೈಲು ನಿಲ್ದಾಣದಿಂದ ಆರಂಭವಾಗಯಿತು. ಕೆಎಸ್‌ಆರ್ ರೈಲು ನಿಲ್ದಾಣ, ಸಂಗೊಳ್ಳಿ ರಾಯಣ್ಣ ವೃತ್ತ, ಆನಂದ ರಾವ್ ಫ್ಲೈಓವರ್ ಮೂಲಕ ಫ್ರೀಡಂ ಪಾರ್ಕ್ ಬಳಿಕ ರಾಜಭವನ ಚಲೋ ಕಾರ್ಯಕ್ರಮ ನಡೆಸಲಾಯಿತು. ಈ ಪ್ರತಿಭಟನೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ರೈತರು ಭಾಗಿಯಾಗಿದ್ದಾರೆ. ಮಹಾರಾಣಿ ಕಾಲೇಜು ಮುಂಭಾಗದ ರಸ್ತೆಯಲ್ಲಿ ರ್ಯಾಲಿ ತಡೆದ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದರು.

ವಶಕ್ಕೆ ಪಡೆ ಕಾರ್ಯಕರ್ತರನ್ನು ನಾಲ್ಕು ಬಿಎಂಟಿಸಿ ಬಸ್ ನಲ್ಲಿ ತುಂಬಿಸಿಕೊಂಡು ಕರೆದೊಯ್ಯುಲಾಯಿತು. ಈ ರ್ಯಾಲಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಪರಮೇಶ್ವರ್, ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು. ಕಾಂಗ್ರೆಸ್ ರಾಜಭವನ ಚಲೋ ರ್ಯಾಲಿಗೆ ಬೆಂಗಳೂರು ನಗರ ಪೊಲೀಸ್ ಅನುಮತಿ ಕೊಟ್ಟಿರಲಿಲ್ಲ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಜಕೀಯ

To Top