Connect with us

Dvgsuddi Kannada | online news portal | Kannada news online

ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಶೃಂಗೇರಿ ಶಾಸಕ ಡಿ.ಎನ್. ಜೀವರಾಜ್ ಆಯ್ಕೆ

ರಾಜಕೀಯ

ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಶೃಂಗೇರಿ ಶಾಸಕ ಡಿ.ಎನ್. ಜೀವರಾಜ್ ಆಯ್ಕೆ

ಬೆಂಗಳೂರು : ಶಾಸಕ ಎಸ್.ಆರ್. ವಿಶ್ವನಾಥ್ ಅವರಿಂದ ತೆರವಾಗಿದ್ದ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಶೃಂಗೇರಿ ಕ್ಷೇತ್ರದ ಮಾಜಿ ಶಾಸಕ ಡಿ.ಎನ್ ಜೀವರಾಜ್ ಅವರನ್ನು ನೇಮಕ ಮಾಡಿ, ರಾಜ್ಯ ಸರ್ಕಾರ ಆದೇಶಿಸಿದೆ.

ಈ ಕುರಿತಂತೆ ಅಧಿಸೂಚನೆ ಹೊರಡಿಸಿರುವಂತ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಶೃಂಗೇರಿ ಕ್ಷೇತ್ರದ ಮಾಜಿ ಶಾಸಕ ಡಿ.ಎನ್. ಜೀವರಾಜ್ ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ನೇಮಿಸಿದೆ.   ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಮಾನ್ಯ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯನ್ನಾಗಿ ಆಯ್ಕೆಯಾಗಿದ್ದಾರೆ.

ಈ ಹಿಂದೆ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿದ್ದ ಯಲಹಂಕ ಶಾಸಕ ಎಸ್. ಆರ್. ವಿಶ್ವನಾಥ್ ಅವರು, ಇತ್ತೀಚೆಗೆ ಬಿಡಿಎ ಅಧ್ಯಕ್ಷರಾಗಿ ನೇಮಕವಾಗಿದ್ದರು.  ಇದೀಗ ಡಿ.ಎನ್.ಜೀವರಾಜ್ ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ರಾಜಕೀಯ

Advertisement

ದಾವಣಗೆರೆ

Advertisement
To Top