ಬೆಂಗಳೂರು:ಕಟ್ಟು ಕಥೆ ಕಟ್ಟುವುದರಲ್ಲಿ ಸಿದ್ದರಾಮಯ್ಯ ನಿಸ್ಸೀಮ, ಪ್ರವೀಣರು. ಅವರ ಕಟ್ಟುವ ಕಟ್ಟುಕಥೆಗೆ ಜ್ಞಾನಪೀಠ ಪ್ರಶಸ್ತಿಯನ್ನೋ ಅಥವಾ ನೊಬೆಲ್ ಪ್ರಶಸ್ತಿಯನ್ನೋ ಕೊಡಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಸಿದ್ದರಾಮಯ್ಯಗೆ ಏನೂ ಉದ್ಯೋಗವಿಲ್ಲ. ಕಥೆ ಕಟ್ಟುವುದರಲ್ಲಿ ನಿರತರಾಗಿದ್ದಾರೆ ಎಂದು ಕುಟುಕಿದರು, ಯತ್ನಾಳ್ ಪಕ್ಷದ ಚೌಕಟ್ಟಿನೊಳಗೆ ಮಾತನಾಡಬೇಕು. ಏನೇ ಮಾತನಾಡಿದರು ಅದಕ್ಕೆ ಸೂಕ್ತವಾದ ದಾಖಲೆ ಕೊಟ್ಟು ಮಾತನಾಡಬೇಕು. ಸುಮ್ಮಸುಮ್ಮನೆ ಗಾಳಿಯಲ್ಲಿ ಗುಂಡು ಹಾರಿಸಿದಂತೆ ಬಾಯಿಗೆ ಬಂದಂತೆ ಮಾತನಾಡುವುದು ಸರಿಯಲ್ಲ. ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪರ ಬದಲಾವಣೆ ಆಗುವುದಿಲ್ಲ ಎಂಬ ವಿಶ್ವಾಸವಿದೆಎಂದರು.



