ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಗಡ್ಡ ಬಿಟ್ಟುಕೊಂಡ ಮಾತ್ರಕ್ಕೆ ರವೀಂದ್ರನಾಥ್ ಠಾಗೂರ್ ಆಗುವುದಿಲ್ಲ ಎಂಬ ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ. ಕಲ್ಯಾಣ ಕರ್ನಾಟಕ ವಿರೋಧಿ ಮಲ್ಲಿಕಾರ್ಜುನ ಖರ್ಗೆ ಅವರೇ ಗಾಂಧಿ ಹೆಸರಿಟ್ಟುಕೊಂಡ ಮಾತ್ರಕ್ಕೆ ಎಲ್ಲರೂ ಮಹಾತ್ಮ ಆಗಲಾರರು. ಈ ನಿಯಮ ನಕಲಿ ಗಾಂಧಿ ಕುಟುಂಬಕ್ಕೆ ಅನ್ವಯ ಆಗುತ್ತದೆಯೇ? ಎಂದು ಬಿಜೆಪಿ ಪ್ರಶ್ನಿಸಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ ಗಾಂಧಿ ಹೆಸರು ಇಟ್ಟುಕೊಂಡ ಮಾತ್ರಕ್ಕೆ ಎಲ್ಲರು ಮಹಾತ್ಮರಾಗುವುದಿಲ್ಲ ಎಂದು ಟಾಂಗ್ ನೀಡಿದೆ.’ಪ್ರಧಾನಿ ನರೇಂದ್ರ ಮೋದಿ ಗಡ್ಡಬಿಟ್ಟರೆ ರವೀಂದ್ರನಾಥ ಠಾಗೋರ್ ಆಗೋದಿಲ್ಲ. ಪಶ್ಚಿಮ ಬಂಗಾಳ ಚುನಾವಣೆ ಗಮನದಲ್ಲಿಟ್ಟುಕೊಂಡು ಮಾಡಿರುವ ನಕಲು ಇದಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಮಸ್ಕಿ ಉಪ ಚುನಾವಣೆ ಪ್ರಚಾರದಲ್ಲಿ ಹೇಳಿದ್ದರು.
ಕಲ್ಯಾಣ ಕರ್ನಾಟಕ ವಿರೋಧಿ @kharge ಅವರೇ,
ಈ ನಿಯಮ ನಕಲಿ ಗಾಂಧಿ ಕುಟುಂಬಕ್ಕೆ ಅನ್ವಯ ಆಗುತ್ತದೆಯೇ?
ಗಾಂಧಿ ಹೆಸರಿಟ್ಟುಕೊಂಡ ಮಾತ್ರಕ್ಕೆ ಎಲ್ಲರೂ ಮಹಾತ್ಮ ಆಗಲಾರರು! pic.twitter.com/9WFuPYS2UW
— BJP Karnataka (@BJP4Karnataka) April 12, 2021



