ಬೆಂಗಳೂರು : ಈಗಾಗಲೇ ಜೆಡಿಎಸ್ ತೊರೆದು, ಕಾಂಗ್ರೆಸ್ ಸೇರಲು ಅಂತಿಮ ಸಿದ್ಧತೆಯಲ್ಲಿರುವಂತ ಮಧು ಬಂಗಾರಪ್ಪ ಬಳಿಕೆ ಜೆಡಿಎಸ್ ಮತ್ತೊಂದು ಶಾಕ್ ಎದಿರಾಗಿದೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದು, ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಕಾಂಗ್ರೆಸ್ ಸೇರುವಂತೆ ಚರ್ಚಿಸಿದ್ದಾರೆ ಎನ್ನಲಾಗಿದೆ.
ಜೆಡಿಎಸ್ ತೊರೆದು, ಕಾಂಗ್ರೆಸ್ ಸೇರುತ್ತಿರುವುದಾಗಿ ಮಧು ಬಂಗಾರಪ್ಪ ಈಗಾಗಲೇ ಘೋಷಿಸಿದ್ದಾರೆ. ತನ್ನೊಂದಿಗೆ ತನ್ನ ಅಕ್ಕ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಸೇರಲಿದ್ದಾರೆ ಎಂದು ಹೇಳಿದ್ದರು. ಇದೀಗ ನಟ ಶಿವರಾಜ್ ಕುಮಾರ್ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ತೀವ್ರ ಕುತೂಹಲ ಮೂಡಿಸಿದೆ.
ತಮ್ಮ ಪತ್ನಿ ಗೀತಾ ಅವರಿಂದ ಜೆಡಿಎಸ್ ಗೆ ಗುಡ್ ಬೈ ಹೇಳಿಸಿ, ಕಾಂಗ್ರೆಸ್ ಸೇರಿಸಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೊಂದಿಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮಾತುಕತೆ ನಡೆಸಿದ್ದಾರೆ. ಈ ಮೂಲಕ ಗೀತಾ ಶಿವರಾಜ್ ಕುಮಾರ್ ಕೂಡ ಜೆಡಿಎಸ್ ಬಿಟ್ಟು, ಸದ್ಯದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆ ಇದೆ.



