Connect with us

Dvgsuddi Kannada | online news portal | Kannada news online

ಜೆಡಿಎಸ್ ಗೆ ಮತ್ತೊಂದು ಶಾಕ್: ಮಧು ಬಂಗಾರಪ್ಪ ಕಾಂಗ್ರೆಸ್ ಸೇರಲು ವೇದಿಕೆ ಸಜ್ಜು  

ರಾಜಕೀಯ

ಜೆಡಿಎಸ್ ಗೆ ಮತ್ತೊಂದು ಶಾಕ್: ಮಧು ಬಂಗಾರಪ್ಪ ಕಾಂಗ್ರೆಸ್ ಸೇರಲು ವೇದಿಕೆ ಸಜ್ಜು  

 ಬೆಂಗಳೂರು: ಶಿವಮೊಗ್ಗ ಲೋಕಸಭಾ ಚುನಾವಣಾ ಸೋಲಿನ ಬಳಿಕ ಜೆಡಿಎಸ್​ ಚಟುವಟಿಕೆಯಲ್ಲಿ ಸಕ್ರಿಯವಾಗಿ ಕಾಣಿಸಿಕೊಳ್ಳದ ಜೆಡಿಎಸ್‌ ಮುಖಂಡ ಮಧು ಬಂಗಾರಪ್ಪ, ಇದೀಗ ಜೆಡಿಎಸ್ ತೆರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ.

ಜೆಡಿಎಸ್ ಕಾರ್ಯಕರ್ತರ ವಿಶ್ವಾಸ  ಜೆಡಿಎಸ್ ಕಳೆದುಕೊಂಡಿದೆ ಎಂದು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದ ಮಧು ಬಂಗಾರಪ್ಪ , ಇದೀಗ ಜೆಡಿಎಸ್ ತೊರೆಯುವುದು ಪಕ್ಕವಾಗಿದೆ. ಜೆಡಿಎಸ್​ ತೊರೆದು ಕಾಂಗ್ರೆಸ್​ ಮನೆಗೆ ಕಾಲಿಡುವ ಕಾಲ ಕೂಡಿ ಬಂದಿದೆ.  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ನಿವಾಸದಲ್ಲಿ ಇಂದ ಕೆಲ ಕಾಲ ಮಧುಬಂಗಾರಪ್ಪ ಸಮಾಲೋಚನೆ ನಡೆಸಿದರು.

ಮಧು ಬಂಗಾರಪ್ಪ ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ. ಮುಂದಿನ ವಾರದಲ್ಲಿ ಈ ಪ್ರಕ್ರಿಯೆ ನಡೆಯಲಿದೆ ಎಂದು  ಡಿಕೆಶಿ ತಿಳಿಸಿದರು. ನನ್ನ ಮಗಳ ಮದುವೆ ಮುಗಿದ ಬಳಿಕ ಪಕ್ಷ ಸೇರ್ಪಡೆ ದಿನಾಂಕ ನಿಗದಿಗೊಳಿಸಲಾಗುವುದು ಎಂದು ಹೇಳಿದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ರಾಜಕೀಯ

Advertisement

ದಾವಣಗೆರೆ

Advertisement
To Top
(adsbygoogle = window.adsbygoogle || []).push({});