Connect with us

Dvgsuddi Kannada | online news portal | Kannada news online

ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿಯಾದ ಮಧು ಬಂಗಾರಪ್ಪ

ಪ್ರಮುಖ ಸುದ್ದಿ

ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿಯಾದ ಮಧು ಬಂಗಾರಪ್ಪ

ಬೆಂಗಳೂರು: ಕಾಂಗ್ರೆಸ್ ಪಕ್ಷ ಸೇರಲು ಸಜ್ಜಾಗಿರುವ ಜೆಡಿಎಸ್ ಮುಖಂಡ ಮಧು ಬಂಗಾರಪ್ಪ, ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಬೆಂಗಳೂರಿನ ಸಿದ್ದರಾಮಯ್ಯ ನಿವಾಸದಲ್ಲಿ ಭೇಟಿ ಮಾಡಿದ ಮಧು ಬಂಗಾರಪ್ಪ, ಕೆಲ ಕಾಲ ಸಮಾಲೋಚನೆ ನಡೆಸಿದರು. ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ಮಾತುಕತೆ ನಡೆಸಿದರು.  ಕಾಂಗ್ರೆಸ್ ಸೇರುವುದು ನಿಶ್ಚಯವಾಗಿದ್ದು.  ಸೇರ್ಪಡೆಯಾಗುವ ದಿನಾಂಕ ಇನ್ನೂ ನಿಗದಿಯಾಗಿಲ್ಲ.

 ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಎಚ್ ಡಿ ಕುಮಾರಸ್ವಾಮಿ, ಜೆಡಿಎಸ್ ಬಾಗಿಲು ತೆರೆದಿದೆ. ಹೋಗುವವರು ಹೋಗಬಹುದು. ದೇವೇಗೌಡರು ಯಾರನ್ನು ಬೆಳೆಸಿದ್ದರೋ ಅವರೇ ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ. ಮಧು ಬಂಗಾರಪ್ಪ ಪಕ್ಷ ತೊರೆಯುವುದು ಹಳೇಯ ವಿಚಾರ ಎಂದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top