ಹುಬ್ಬಳ್ಳಿ: ಸಿದ್ದರಾಮಯ್ಯಗೆ ಸೋಲಿನ ಭಯ ಉಂಟಾಗಿದೆ. ಹೀಗಾಗಿ ಮುಂಬರುವ ಚುನಾವಣೆಯಲ್ಲಿ ಅವರು ನೂರಕ್ಕೆ ನೂರಷ್ಟು ಸ್ಪರ್ಧೆ ಮಾಡಲ್ಲ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಕಳೆದ ಚುನಾವಣೆಯಲ್ಲಿ ಚುನಾವಣೆಗೆ ನಿಲ್ಲುವುದಿಲ್ಲ ಎಂದಿದ್ದರು. ಎರಡೆರಡು ಕಡೆ ನಿಂತರು. ಮತ್ತೆ ಬಾದಾಮಿಯಲ್ಲಿ ನಿಲ್ಲುವುದಾಗಿ ಹೇಳಿದ್ದಾರೆ. ಸಿದ್ದರಾಮಯ್ಯ ಅವರ ದ್ವಂದ್ವ ನಿಲುವುನಿಂದ ಅವರು ನೂರಕ್ಕೆ ನೂರು ಚುನಾವಣೆಗೆ ನಿಲ್ಲಲ್. ಇನ್ನು ಈ ಬಾರಿಯ ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ. ಇದುವರೆಗಿನ ಎಲ್ಲ ಉಪಚುನಾವಣೆಗಳಲ್ಲಿ ನಾವೇ ಗೆದ್ದಿದ್ದೇವೆ ಎಂದರು.



