ಚಾಮರಾಜನಗರ: ಸಚಿವ ಸ್ಥಾನ ನೀಡಿದರೆ, ಬಿಜೆಪಿಗೆ ಸೇರ್ಪಡೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು, ಬಿಎಸ್‌ಪಿಯಿಂದ ಉಚ್ಚಾಟಿತ ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸೇರ್ಪಡೆ ಬಗ್ಗೆ ನಿರ್ಧಾರ ಕೈಗೊಂಡಿಲ್ಲ. ಸಂಕ್ರಾಂತಿ ನಂತರ ನೋಡೋಣ. ಯಾವುದೇ ತೀರ್ಮಾನ ಕೈಗೊಳ್ಳಬೇಕಾದರೆ ಸಂದರ್ಭ ಸೃಷ್ಟಿಯಾಗಬೇಕು. ನಾವೇ ತೀರ್ಮಾನ ಕೈಗೊಳ್ಳಲು ಬರುವುದಿಲ್ಲ ಎಂದರು.
ಸ್ಥಾನಮಾನ ಸಿಕ್ಕಿದರೆ ಕ್ಷೇತ್ರ ಹಾಗೂ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಬಿಜೆಪಿ ಸೇರ್ಪಡೆ ಬಗ್ಗೆ ನಿರ್ಧಾರ ಕೈಗೊಳ್ಳಬಹುದು. ಈ ವಿಚಾರವಾಗಿ ಬಿಜೆಪಿ ನಾಯಕರೊಂದಿಗೆ ಮಾತುಕತೆ ನಡೆದಿಲ್ಲ ಎಂದು ತಿಳಿಸಿದರು.



