ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಸದಸ್ಯರೊಬ್ಬರು ಅಶ್ಲೀಲ ದೃಶ್ಯ ನೋಡಿರುವ ಆರೋಪ ಎದುರಾಗಿದೆ. ಜಂಟಿ ಅಧಿವೇಶನದ ಬಳಿಕ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ಸಂದರ್ಭದಲ್ಲಿ ಕಾಂಗ್ರೆಸ್ ಸದಸ್ಯ ಪ್ರಕಾಶ್ ರಾಠೋಡ್ ಅವರು ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರ ವೀಕ್ಷಣೆ ಮಾಡಿದ್ದಾರೆ.
ವಿಧಾನ ಸಭೆಯಲ್ಲಿ ಅಶ್ಲೀಲ ದೃಶ್ಯ ನೋಡಿದ ಆರೋಪ ಹಿಂದೆ ಬಿಜೆಪಿ ಸರ್ಕಾರದಲ್ಲಿ ನಡೆದಿತ್ತು. ಹಿಂದೆ ವಿಧಾನಸಭೆಯಲ್ಲಿ ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲೆ ವಿಶೇಷ ಚರ್ಚೆ ನಡೆದಿರುವಾದ ಆಗ ಸಚಿವರಾಗಿದ್ದ ಬಿಜೆಪಿಯ ಮೂವರು ನೀಲಿ ಚಲನಚಿತ್ರ ವೀಕ್ಷಣೆ ಮಾಡಿದ್ದರು.
ಇದೀಗ ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ ಸದಸ್ಯರು ನೀಲಿ ಚಿತ್ರ ವೀಕ್ಷಣೆ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ. ಹಿಂದೆ ಬಿಜೆಪಿ ಮೇಲೆ ವಾಗ್ದಾಳಿ ಮಾಡಿದ್ದ ಕಾಂಗ್ರೆಸ್ ಈಗ ತನ್ನ ಶಾಸಕರ ಮೇಲೆ ಏನು ಕ್ರಮಕೈಗೊಳ್ಳುತ್ತದೆ ಎಂಬುದು ಕುತೂಹಲ ಮೂಡಿಸಿದೆ



