ಬೆಂಗಳೂರು: ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಚುನಾವಣೆ ಮೈತ್ರಿ ವಿಚಾರಕ್ಕೆ ಪಕ್ಷದಿಂದ ನನಗೆ ಇದುವರೆಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ತನ್ವೀರ್ ಸೇಠ್ ಹೇಳಿದ್ದಾರೆ.
ಸುದ್ದಿಗಾರೊಂದಿಗೆ ಮಾತನಾಡಿದ ಅವರು, ನಾನು ಪಕ್ಷದ ವರಿಷ್ಠರು ಹೇಳಿದಂತೆ ನಡೆದುಕೊಂಡಿದ್ದೇನೆ. ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿ. ನನಗೆ ಯಾವುದೇ ನೋಟಿಸ್ ಬಂದಿಲ್ಲ. ನೋಟಿಸ್ ಬಂದರೇ ಉತ್ತರ ಕೊಡುತ್ತೇನೆ ಎಂದಿದ್ದಾರೆ.
ಜೆಡಿಎಸ್ ಜೊತೆಗಿನ ಮೈತ್ರಿ ವಿಷಯವನ್ನು ವಿವರಿಸಿದ್ದೇನೆ. ಮಧು ಯಕ್ಷಿಗೌಡ ಜೊತೆಗೂ ಈಗಾಗಲೇ ಚರ್ಚಿಸಲಾಗಿದೆ. ಮೈಸೂರು ಮಹಾನಗರ ಪಾಲಿಕೆಯಲ್ಲಿನ ಮೇಯರ್ ಹಾಗೂ ಉಪ ಮೇಯರ್ ಆಯ್ಕೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಕೂಡ ಸಮ್ಮತಿಸಿದ್ದರು. ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷ ಹೇಳಿದಂತೆ ನಡೆದುಕೊಂಡಿದ್ದೇನೆ. ಪಕ್ಷ ಜೊತೆಗೆ ನಿಲ್ಲುತ್ತದೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.



