Connect with us

Dvgsuddi Kannada | online news portal | Kannada news online

ಯತ್ನಾಳ್ ಬಳಿಕ ಸಚಿವ ಮುರುಗೇಶ್ ನಿರಾಣಿಗೆ ಹೈಕಮಾಂಡ್ ಬುಲಾವ್; ರಾತ್ರಿ ದೆಹಲಿಗೆ ತೆರಳಿದ ಸಚಿವರು

ದಾವಣಗೆರೆ

ಯತ್ನಾಳ್ ಬಳಿಕ ಸಚಿವ ಮುರುಗೇಶ್ ನಿರಾಣಿಗೆ ಹೈಕಮಾಂಡ್ ಬುಲಾವ್; ರಾತ್ರಿ ದೆಹಲಿಗೆ ತೆರಳಿದ ಸಚಿವರು

ಬೆಂಗಳೂರು: ಸಚಿವ ಮುರುಗೇಶ್ ನಿರಾಣಿ ದೆಹಲಿಗೆ ಬರುವಂತೆ ಹೈಕಮಾಂಡ್ ಬುಲಾವ್ ನೀಡಿದೆ. ರಾತ್ರಿ ದೆಹಲಿ ಪ್ರಯಾಣ ಬೆಳೆಸಿದ ಸಚಿವರು ವರಿಷ್ಠರನ್ನು ಭೇಟಿಯಾಗಿ ಪಂಚಮಸಾಲಿ ಸಮಾವೇಶದ ಕುರಿತಾಗಿ ಮಾಹಿತಿ ನೀಡಲಿದ್ದಾರೆ.

ಮುಖ್ಯಮಂತ್ರಿ, ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದು ಪಕ್ಷದ ಕೆಂಗಣ್ಣಿಗೆ ಗುರಿಯಾಗಿದ್ದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಹೈಕಮಾಂಡ್ ಸೂಚನೆ ಮೇರೆಗೆ ಈಗಾಗಲೇ ದೆಹಲಿಗೆ ತೆರಳಿದ್ದಾರೆ. ಪಂಚಮಸಾಲಿ ಹೋರಾಟದ ವೇಳೆ ಅವರು ಸರ್ಕಾರದ ವಿರುದ್ಧ ಹರಿಹಾಯ್ದಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ದೆಹಲಿಗೆ ಕರೆಸಿಕೊಳ್ಳಲಾಗಿದೆ.

ಯತ್ನಾಳ್ ಅವರು ದೆಹಲಿಯಲ್ಲಿ ಇರುವಾಗಲೇ ಸಚಿವ ಮುರುಗೇಶ್ ನಿರಾಣಿ ಅವರಿಗೆ ಹೈಕಮಾಂಡ್ ಬುಲಾವ್ ನೀಡಿದ್ದು ದೆಹಲಿಗೆ ಬರುವಂತೆ ತಡರಾತ್ರಿ ಬುಲಾವ್ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಿದ ಸಚಿವ ನಿರಾಣಿ ಪಂಚಮಸಾಲಿ ಸಮುದಾಯದ ಸಮಾವೇಶದ ಬಗ್ಗೆ ಹೈಕಮಾಂಡ್ ಗೆ ವಿವರ ನೀಡಲಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top