Connect with us

Dvgsuddi Kannada | online news portal | Kannada news online

ಬೆಂಗಳೂರು:ಬಿಜೆಪಿ ಶಾಸಕನ ಹತ್ಯೆಗೆ ಸಂಚು; ಕಾಂಗ್ರೆಸ್ ಮುಖಂಡ ವಶ

vishwa

ದಾವಣಗೆರೆ

ಬೆಂಗಳೂರು:ಬಿಜೆಪಿ ಶಾಸಕನ ಹತ್ಯೆಗೆ ಸಂಚು; ಕಾಂಗ್ರೆಸ್ ಮುಖಂಡ ವಶ

 ಬೆಂಗಳೂರು: ಬಿಜೆಪಿ ಶಾಸಕ ಹಾಗೂ ಬಿಡಿಎ ಅಧ್ಯಕ್ಷ ಎಸ್. ಆರ್. ವಿಶ್ವನಾಥ್ ಹತ್ಯೆಗೆ ಸಂಚು ರೂಪಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಎಂಬುವವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಾಂಗ್ರೆಸ್ ಮುಖಂಡ ಎಂ.ಎನ್.ಗೋಪಾಲಕೃಷ್ಣ ಎಸ್.ಆರ್. ವಿಶ್ವನಾಥ್ ಹತ್ಯೆಗೆ ಸಂಚು ರೂಪಿಸಿದ ಎನ್ನಲಾದ ವಿಡಿಯೋ ಸಿಸಿಬಿ ಅಧಿಕಾರಿಗಳಿಗೆ ಲಭ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಗೋಪಾಲಕೃಷ್ಣ ಅವರನ್ನು ವಶಕ್ಕೆ ಪಡೆಯಲಾಗಿದೆ. ಗೋಪಾಲಕೃಷ್ಣ ಯಲಹಂಕ ವಿಧಾನಸಭಾ ಕ್ಷೇತ್ರದಿಂದ ವಿಶ್ವನಾಥ್ ವಿರುದ್ಧ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಎರಡು ಬಾರಿ ಸೋತಿದ್ದರು.

ಗೋಪಾಲಕೃಷ್ಣ ಹಾಗೂ ಎಸ್.ಆರ್.ವಿಶ್ವನಾಥ್ ಬೆಂಬಲಿಗ ದೇವರಾಜ್ ಅಲಿಯಾಸ್ ಕುಳ್ಳದೇವರಾಜ್ ಇಬ್ಬರು ಕೊಲೆಗೆ ಸ್ಕೆಚ್ ಹಾಕಿ ಮಾತನಾಡುತ್ತಿದ್ದ ವಿಡಿಯೋ ವೈರಲ್ ಆಗಿದ್ದು, ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top