Connect with us

Dvgsuddi Kannada | online news portal | Kannada news online

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ: ನಾಳೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ ಸಚಿವ ಈಶ್ವರಪ್ಪ

ಪ್ರಮುಖ ಸುದ್ದಿ

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ: ನಾಳೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ ಸಚಿವ ಈಶ್ವರಪ್ಪ

ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಅವರು 40 ಪರ್ಸೆಂಟ್ ಕಮಿಷನ್ ಆರೋಪ ಹಿನ್ನೆಲೆ, ಪ್ರತಿ ಪಕ್ಷಗಳು ಈಶ್ವರಪ್ಪ‌‌‌ ರಾಜೀನಾಮೆಗೆ ಬಿಗಿಪಟ್ಟು ಹಿಡಿದಿದ್ದರಿಂದ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಈಶ್ವರಪ್ಪ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಶಿವಮೊಗ್ಗದಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿದ ಅವರು, ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸಂಜೆ ಭೇಟಿಯಾಗಿ ರಾಜೀನಾಮೆ ಸಲ್ಲಿಸುವುದಾಗಿ ಹೇಳಿದರು. ಗ್ರಾಮೀಣಾಭಿವೃದ್ಧಿ ಇಲಾಖೆ ಸಿಕ್ಕಿದ್ದು ನನ್ನ ಸೌಭಾಗ್ಯ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಅತ್ಯದ್ಭುತ ಕೆಲಸವನ್ನು ನಿರ್ವಹಿಸಿದ್ದೇವೆ. ಪಕ್ಷಕ್ಕೆ ಮುಜುಗರವಾಗಬಾರದು ಎಂದು ರಾಜೀನಾಮೆ ನಿರ್ಧಾರ ಪ್ರಕಟಿಸಿದ್ದೇನೆ ರಾಜೀನಾಮೆ ನೀಡುವ ಬಗ್ಗೆ ಎರಡು ಮೂರು ದಿನದ ಹಿಂದೆ ನಿರ್ಧರಿಸಿದ್ದೆ. ನೈತಿಕ ಜವಾಬ್ದಾರಿ ಹೊಣೆ ಹೊತ್ತು ರಾಜೀನಾಮೆಗೆ ನಿರ್ಧರಿಸಿದ್ದೇನೆ ಎಂದರು.

ಈ ಕುರಿತು ನಾನು ಸಿಎಂ ಜೊತೆಗೆ ಚರ್ಚಿಸಿದ್ದೇನೆ. ಪ್ಕರಣದಲ್ಲಿ ಮುಕ್ತವಾಗಿ ಹೊರ ಬರುತ್ತೇನೆ. ತಪ್ಪು ಮಾಡಿದ್ದರೆ ದೇವರು ನನಗೆ ಶಿಕ್ಷೆ ನೀಡಲಿ. ಎಲ್ಲ ಕಾರ್ಯಕರ್ತರಿಗೂ ಧನ್ಯವಾದವನ್ನು ಸಲ್ಲಿಸುತ್ತೇನೆ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top